
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಬೆಂಗಳೂರಿಗೆ ಭೇಟಿ ನೀಡಿದ್ದಾರೆ. ಈ ವೇಳೆ ದೇವನಹಳ್ಳಿ ಕಂಟೋನ್ಮೆಂಟ್ ರೈಲು ನಿಲ್ದಾಣ ನವೀಕರಣ ಕಾಮಗಾರಿ ಪರಿಶೀಲನೆ ನಡೆಸಿದ್ದಾರೆ. ದೇವನಹಳ್ಳಿ ರೈಲ್ವೆ ನಿಲ್ದಾಣದಿಂದ ಕಂಟೋನ್ಮೆಂಟ್ ರೈಲು ನಿಲ್ದಾಣದ ತನಕ ನಡೆಸಲಾಗುತ್ತಿರುವ ರೈಲ್ವೆ ಇಲಾಖೆಗೆ ಸಂಬಂಧಪಟ್ಟ ಕಾಮಗಾರಿಗಳನ್ನು ಪರಿಶೀಲನೆ ಮಾಡಲಾಗಿದೆ. ಈ ವೇಳೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಸಚಿವ ವಿ ಸೋಮಣ್ಣ, ಸಂಸದ ಪಿಸಿ ಮೋಹನ್ ಮತ್ತು ರೈಲ್ವೆ ಅಧಿಕಾರಿಗಳು ಸಾಥ್ ನೀಡಿದ್ದಾರೆ.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅಶ್ವಿನಿ ವೈಷ್ಣವ್, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಯಲಹಂಕವರೆಗೆ ರೈಲ್ವೆ ಲೈನ್ ಮಾಡಲಾಗುವುದು. ಬೆಂಗಳೂರು ಕಂಟೊನ್ಮೆಂಟ್ ಬಹಳ ಮಹತ್ವದ ನಿಲ್ದಾಣ. ಎಸ್ಎಂವಿ ಬಳಿಕ ಕಂಟೋನ್ಮೆಂಟ್, ಯಶವಂತಪುರ ರೈಲ್ವೆ ನಿಲ್ದಾಣ ಮರು ನಿರ್ಮಾಣ ಕಾಮಗಾರಿ ನಡೆಯುತ್ತಿದೆ. 18 ಸಾವಿರ ಸ್ಕ್ವೇರ್ ಮೀಟರ್ ಅಗಲೀಕರಣ ಮಾಡಲಾಗಿದೆ. ಅಂಡರ್ ಗ್ರೌಂಡ್ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುತ್ತಿದೆ ಹೇಳಿದ್ದಾರೆ.
Poll (Public Option)

Post a comment
Log in to write reviews