2024-12-24 12:58:33

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಬಿಜೆಪಿ ಕ್ಷೇತ್ರಗಳಿಗೆ ಅನುದಾನ ತಾರತಮ್ಯ - ಡಿಕೆಶಿ ವಿರುದ್ಧ ಎಫ್‌ಐಆರ್‌

ಬೆಂಗಳೂರಿನ ಜಯನಗರ ಕ್ಷೇತ್ರಕ್ಕೆ ಅನುದಾನ ಹಂಚಿಕೆ ಮಾಡದ ವಿಚಾರ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇದೀಗ ಇದೇ ವಿಚಾರವನ್ನು ಇಟ್ಟುಕೊಂಡು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದೆ.
ಈ ಹಿಂದೆ ಡಿಕೆಶಿ ನಾನೇ ಬೆಂಗಳೂರಿನ ಜಯನಗರ ಕ್ಷೇತ್ರದ ಬಿಟ್ಟು ಉಳಿದೆಲ್ಲ ವಿಧಾನಸಭಾ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಲು ಆದೇಶಿಸಿದ್ದೇನೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದರು, ಡಿಕೆಶಿಯ ಈ ಹೇಳಿಕೆಯನ್ನು ಕೇಳಿ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 
ಈ ಬಗ್ಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಡಿಸಿಎಂ ಡಿಕೆಶಿ ಅವರಿಗೆ ಪತ್ರವನ್ನು ಕೂಡ ಬರೆದಿದ್ದರು, ಇದೀಗ ಈ ವಿಚಾರವನ್ನು ಇಟ್ಟುಕೊಂಡು ವಕೀಲ ಹೆಚ್.ಯೋಗೇಂದ್ರ ಎಂಬುವವರು ಡಿಕೆ ಶಿವಕುಮಾರ್ ವಿರುದ್ಧ ಬುಧವಾರ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದಾರೆ. ಈ ದೂರಿನಲ್ಲಿ, ಬೆಂಗಳೂರು ಅಭಿವೃದ್ಧಿ ಖಾತೆ ಸಚಿವರ ವಿವೇಚನಾ ಕೋಟಾದಡಿ ಅನುದಾನ ಹಂಚಿಕೆ ಮಾಡದೇ, ಉಪಮುಖ್ಯಮಂತ್ರಿ ಆಗುವ ವೇಳೆ ಸ್ವೀಕರಿಸಿದ್ದ ಪ್ರಮಾಣ ವಚನವನ್ನು ಉಲ್ಲಂಘಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖವಾಗಿದೆ.
 

Post a comment

No Reviews