
ರಾಯಚೂರು: ಕೇತ್ರದ ಅಭಿವೃದ್ಧಿ ಬಗ್ಗೆ ನೂತನ ಸಂಸದ ಜಿ ಕುಮಾರ ನಾಯಕ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದಾರೆ. ವಿಧಾನಸೌಧದಲ್ಲಿ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರವಿಶಂಕರ್‌ರನ್ನು ಭೇಟಿಯಾಗಿ ಚರ್ಚೆ ಮಾಡಿದ್ದಾರೆ. ರಾಯಚೂರು ಮತ್ತು ಯಾದಗಿರಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಅಭಿವೃದ್ಧಿಯ ಕುರಿತು ಸಂಕ್ಷಿಪ್ತವಾಗಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ರಾಯಚೂರು ಹಾಗೂ ಯಾದಗಿರಿ ಲೋಕಸಭಾ ಕ್ಷೇತ್ರದ ಮಹಾ ಜನತೆ ಸರ್ವಾಂಗೀಣ ಅಭಿವೃದ್ಧಿಯ ದೃಷ್ಟಿಕೋನದೊಂದಿಗೆ ನನ್ನ ಮೇಲೆ ನಂಬಿಕೆ ವಿಶ್ವಾಸವನ್ನಿಟ್ಟು ನನ್ನನ್ನು ಸಂಸದನನ್ನಾಗಿ ಆಯ್ಕೆ ಮಾಡಿದ್ದಾರೆ. ಕ್ಷೇತ್ರದ ಜನರ ನಂಬಿಕೆ ವಿಶ್ವಾಸದಂತೆ ಅಭಿವೃದ್ಧಿ ಕೆಲಸ ಮಾಡಲು ಸಹಕರಿಸಬೇಕೆಂದು ಜಿ ಕುಮಾರ ನಾಯಕ ತಿಳಿಸಿದರು.
Poll (Public Option)

Post a comment
Log in to write reviews