ರಾಜಕೀಯ
ರಾಜ್ಯ ವಿಭಜನೆ ಸಮಸ್ಯೆ ಕುರಿತು ತೆಲಂಗಾಣ ಸಿಎಂ ಜೊತೆ ಚರ್ಚೆ: ಎನ್.ಚಂದ್ರಬಾಬು ನಾಯ್ಡು

ಅಮರಾವತಿ: ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ಇತ್ಯರ್ಥವಾಗದ ರಾಜ್ಯ ವಿಭಜನೆ ಸಮಸ್ಯೆಗಳ ಕುರಿತು ಪತ್ರ ಬರೆದಿದ್ದಾರೆ.
ಹೈದರಾಬಾದ್ನಲ್ಲಿರುವ ಸಿಎಂ ರೇವಂತ್ ರೆಡ್ಡಿ ಅವರ ನಿವಾಸಕ್ಕೆ ಖುದ್ದು ಭೇಟಿ ನೀಡುವುದಾಗಿ ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ. ಆಂಧ್ರಪ್ರದೇಶ ಮತ್ತು ತೆಲಂಗಾಣ ಎರಡು ರಾಜ್ಯಗಳ ಸುಸ್ಥಿರ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ನಿಕಟ ಸಹಭಾಗಿತ್ವ ಹೊಂದುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಹಾಗಾಗಿ ಮುಖಾಮುಖಿ ಸಭೆಯಲ್ಲಿ ಪರಸ್ಪರ ಮಾತುಕತೆ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಅವರು ಹೇಳಿದ್ದಾರೆ.
Poll (Public Option)

Post a comment
Log in to write reviews