
ದೀಪಾವಳಿಗೆ ಇಡೀ ಬೆಂಗಳೂರು ಭರ್ಜರಿ ಸಿದ್ಧತೆ ಮಾಡಿದ್ದು, ಈಗಾಗಲೇ ನಗರದಲ್ಲಿ ಸಂಭ್ರಮದ ವಾತಾವರಣ ಮನೆ ಮಾಡಿದೆ. ಇನ್ನೂ ಚಾಮರಾಜಪೇಟೆ ಸೇರಿ ಹಲವೆಡೆ ಮೈದಾನಗಳಲ್ಲಿ ಪಟಾಕಿ ಸ್ಟಾಲ್ಗಳಲ್ಲಿ ಭರ್ಜರಿ ವ್ಯಾಪಾರವಾಗುತ್ತಿದೆ. ಇನ್ನು ಹಸಿರು ಪಟಾಕಿಗಳ ಮಾರಾಟ ಮಾಡಲು ಮಾತ್ರ ಅವಕಾಶ ಕೊಟ್ಟಿರುವುದರಿಂದ ಪೊಲೀಸರು ನೀಡಿರುವ ಮಾರ್ಗಸೂಚಿಯಂತೆಯೇ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಪಟಾಕಿ ವ್ಯಾಪಾರ ನಡೆಸಲಾಗುತ್ತಿದೆ.
ಇನ್ನು ಬಗೆ ಬಗೆಯ ಗ್ರೀನ್ ಪಟಾಕಿಗಳು ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದು, ಹೊಸೂರಿನಿಂದ ಬಂದಿರುವ ಪಟ್ ಪಟ್ ಪಟಾಕಿಗಳು ಗ್ರಾಹಕರ ಗಮನಸೆಳೆಯುತ್ತಿವೆ. ಗ್ರೀನ್ ಪಟಾಕಿಗೆ ಮಾತ್ರ ಮಾರಾಟಕ್ಕೆ ಅವಕಾಶ ಇರುವುದರಿಂದ ಢಂ ಢಂ ಅಂತಾ ಸದ್ದುಮಾಡುವ ದೊಡ್ಡ ದೊಡ್ಡ ಪಟಾಕಿಗಳಿಗೆ ಹುಡುಕಾಡುವ ಜನರಿಗೆ ಸ್ವಲ್ಪ ಬೇಸರವಾಗಿದೆ. ಅತ್ತ ಪಟಾಕಿಗಳ ಬೆಲೆ ಏರಿಕೆಯಾಗಿರುವುದು ಕೂಡ ಗ್ರಾಹಕರನ್ನು ನಿರಾಸೆಗೊಳಿಸಿದೆ. ಸದ್ಯ ಇಂದಿನಿಂದ ದೀಪಾವಳಿಯ ಆಚರಣೆ ಶುರುವಾಗಿದ್ದು, ಹಬ್ಬವನ್ನು ದೀಪಗಳ ಜೊತೆ ರಂಗೇರಿಸಲು ಪಟಾಕಿಗಳು ಕೂಡ ಸಜ್ಜಾಗಿವೆ.
Poll (Public Option)

Post a comment
Log in to write reviews