ಕರ್ನಾಟಕ
ಬಾಕಿ ರೈಲ್ವೆ, ಜಲ ಯೊಜನೆ ಪೂರ್ಣಗೊಳಿಸಲು ಕೇಂದ್ರ ಸರ್ಕಾರಕ್ಕೆ ಡಿ.ಕೆ ಸುರೇಶ್ ಮನವಿ

ಬೆಂಗಳೂರು: ರಾಜ್ಯದ ಬಾಕಿ ರೈಲ್ವೆ ಹಾಗೂ ಜಲ ಮಿಷನ್ ಯೋಜನೆಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಸರಕಾರಕ್ಕೆ ಮಾಜಿ ಸಂಸದ ಡಿ.ಕೆ ಸುರೇಶ್ ಅವರು ಮನವಿ ಮಾಡಿದ್ದಾರೆ.
ಡಿ.ಕೆ ಸುರೇಶ್ ಅವರು ದೆಹಲಿಯಲ್ಲಿ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿ ಈ ಮನವಿ ಸಲ್ಲಿಸಿದರು. ಹೆಜ್ಜಾಲ, ಕನಕಪುರ ಹಾಗೂ ಚಾಮರಾಜನಗರ ಹೊಸ ರೈಲ್ವೆ ಮಾರ್ಗ ಈ ಹಿಂದೆಯೇ ಮಂಜೂರಾಗಿ, ಟೆಂಡರ್ ಪ್ರಕ್ರಿಯೆ ಆಗಿದ್ದರೂ ಕಾಮಗಾರಿ ಮಾತ್ರ ಆರಂಭವಾಗಿಲ್ಲ. ಅದೇ ರೀತಿ ರಾಜ್ಯದ ಅನೇಕ ರೈಲ್ವೆ ಯೋಜನೆಗಳು ಹತ್ತು ವರ್ಷಗಳಿಂದ ನೆನೆಗುದಿಗೆ ಬಿದ್ದಿವೆ. ಈ ಯೋಜನೆಗಳಿಗೆ ಅನುದಾನ ನೀಡಿ ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಿ ಎಂದು ಸುರೇಶ್ ಅವರು ಕೋರಿದರು.
Poll (Public Option)

Post a comment
Log in to write reviews