
ಚಾಂಪಿಯನ್ಸ್ ಟ್ರೋಫಿ 2024 : ಟೂರ್ನಿಯನ್ನು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಆಯೋಜಿಸಲಿದೆ. ಪಾಕ್ನಲ್ಲಿ ನಡೆಯಲಿರುವ ಈ ಟೂರ್ನಿಯ ಕರಡು ವೇಳಾಪಟ್ಟಿ ಪ್ರಕಟವಾಗಿದ್ದು, ಈ ವೇಳಾಪಟ್ಟಿಯಂತೆ ಟೀಮ್ ಇಂಡಿಯಾದ ಪಂದ್ಯಗಳು ಲಾಹೋರ್ನಲ್ಲಿ ನಡೆಯಲಿದೆ. ಆದರೆ ಈ ಟೂರ್ನಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ತೆರಳಲಿದೆಯಾ ಎಂಬುದನ್ನು ಇನ್ನಷ್ಟೇ ನಿರ್ಧರಿಸಬೇಕಿದೆ.
ಚಾಂಪಿಯನ್ಸ್ ಟ್ರೋಫಿ 2025 ಫೆಬ್ರವರಿ 19 ರಿಂದ ಶುರುವಾಗಲಿದೆ. ಪಾಕಿಸ್ತಾನದಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಟೀಮ್ ಇಂಡಿಯಾ ಪರ ಯಾರು ಆರಂಭಿಕರಾಗಿ ಕಣಕ್ಕಿಳಿಯಬೇಕೆಂದು ತಿಳಿಸಿದ್ದಾರೆ ದಿನೇಶ್ ಕಾರ್ತಿಕ್. ಏಕೆಂದರೆ ಮುಂಬರುವ ಚಾಂಪಿಯನ್ಸ್ ಟ್ರೋಫಿ ಏಕದಿನ ಮಾದರಿಯಲ್ಲಿ ನಡೆಯಲಿದೆ. ಹೀಗಾಗಿ ಇಲ್ಲಿ ತಾಳ್ಳೆಯುತ ಬ್ಯಾಟಿಂಗ್ ಪ್ರದರ್ಶಿಸುವ ಬ್ಯಾಟರ್ ಆರಂಭಿಕನಾಗಿ ಕಣಕ್ಕಿಳಿಯಬೇಕು
ಹೀಗಾಗಿಯೇ ದಿನೇಶ್ ಕಾರ್ತಿಕ್ ಚಾಂಪಿಯನ್ಸ್ ಟ್ರೋಫಿಯನ್ನು ರೋಹಿತ್ ಶರ್ಮಾ ಜೊತೆ ಶುಭ್ಮನ್ ಗಿಲ್ ಆರಂಭಿಕರಾಗಿ ಕಣಕ್ಕಿಳಿಯಬೇಕೆಂದು ತಿಳಿಸಿದ್ದಾರೆ. ಇಲ್ಲಿ ಹಿಟ್ಮ್ಯಾನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರೆ, ಗಿಲ್ ತಾಳ್ಮೆಯುತ ಬ್ಯಾಟಿಂಗ್ಗೆ ಹೆಸರುವಾಸಿ. ಹೀಗಾಗಿ ಈ ಜೋಡಿಯನ್ನು ಓಪನರ್ಗಳಾಗಿ ಮುಂದುವರೆಸುವುದು ಉತ್ತಮ ಎಂದು ಡಿಕೆ ಅಭಿಪ್ರಾಯಪಟ್ಟಿದ್ದಾರೆ.
ಇದೇ ವೇಳೆ ಯಶಸ್ವಿ ಜೈಸ್ವಾಲ್ ಅವರನ್ನು ಬ್ಯಾಕ್ ಅಪ್ ಓಪನರ್ ಆಗಿ ಆಯ್ಕೆ ಮಾಡಬೇಕೆಂದು ದಿನೇಶ್ ಕಾರ್ತಿಕ್ ಸಲಹೆ ನೀಡಿದ್ದಾರೆ. ಏಕೆಂದರೆ ಗಿಲ್ ನಿರೀಕ್ಷಿತ ರೀತಿಯಲ್ಲಿ ಪ್ರದರ್ಶನ ನೀಡದಿದ್ದರೆ ಜೈಸ್ವಾಲ್ ಅವರನ್ನು ಕಣಕ್ಕಿಳಿಸುವುದು ಉತ್ತಮ. ಯುವ ಎಡಗೈ ದಾಂಡಿಗ ಈಗಾಗಲೇ ತಮ್ಮ ಸಾಮರ್ಥ್ಯವನ್ನು ತೆರೆದಿಟ್ಟಿದ್ದಾರೆ. ಹೀಗಾಗಿ ಅವರು ಸಹ ತಂಡದಲ್ಲಿರಬೇಕೆಂದು ದಿನೇಶ್ ಕಾರ್ತಿಕ್ ಕ್ರಿಕ್ಬಝ್ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.
ಇದೇ ವೇಳೆ ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕವು ಬಲಿಷ್ಠವಾಗಿದೆ ಎಂದು ತಿಳಿಸಿರುವ ದಿನೇಶ್ ಕಾರ್ತಿಕ್, ಉತ್ತಮ ಆರಂಭ ಪಡೆದರೆ ಭಾರತ ತಂಡವು ಬೃಹತ್ ಮೊತ್ತ ಪೇರಿಸುವುದರಲ್ಲಿ ಅನುಮಾನವೇ ಬೇಡ ಎಂದಿದ್ದಾರೆ.
ಅಂದಹಾಗೆ ಏಕದಿನ ವಿಶ್ವಕಪ್ 2023 ರಲ್ಲಿ ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಅಲ್ಲದೆ ಈ ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಫೈನಲ್ ಪ್ರವೇಶಿಸಿರುವ ಕಾರಣ ಅದೇ ಬಳಗವನ್ನೇ ಚಾಂಪಿಯನ್ಸ್ ಟ್ರೋಫಿಗೂ ಆಯ್ಕೆ ಮಾಡಬಹುದು. ಇಲ್ಲಿ ಇಶಾನ್ ಕಿಶನ್ ಬದಲಿಗೆ ರಿಷಭ್ ಪಂತ್ಗೆ ಚಾನ್ಸ್ ನೀಡುವ ಸಾಧ್ಯತೆ ಹೆಚ್ಚಿದೆ.
2023ರ ಏಕದಿನ ವಿಶ್ವಕಪ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್/ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.
Poll (Public Option)

Post a comment
Log in to write reviews