
ಒಂದೆಡೆ ಸಿಎಂ ಸಿದ್ದರಾಮಯ್ಯಗೆ ಮುಡಾ ಹಗರಣದ ತನಿಖೆ ಇಂದಿನಿಂದ ಶುರುವಾದ್ರೆ ಮತ್ತೊಂದೆಡೆ ಕಾಂಗ್ರೆಸ್ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಳ್ಳುತ್ತಿದೆ. ಈ ಎಲ್ಲಾ ಬೆಳವಣಿಗೆ ಮಧ್ಯೆ ಸಿಎಂ ಸ್ಥಾನದ ಆಕಾಂಕ್ಷಿಗಳು ಪದೇ ಪದೇ ಭೇಟಿಯಾಗಿ ಸಮಾಲೋಚನೆ ನಡೆಸುತ್ತಿರುವುದು ಕುತೂಹಲ ಮೂಡಿಸಿದೆ. ಸದ್ಯ ಇದೀಗ ಎತ್ತಿನಹೊಳೆ ನೆಪದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಗೃಹ ಸಚಿವ ಜಿ ಪರಮೇಶ್ವರ್ ಭೇಟಿಯಾಗಿದ್ದಾರೆ.
ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಉಭಯ ನಾಯಕರು ಭೇಟಿಯಾಗಿದ್ದಾರೆ. ಇಬ್ಬರು ನಾಯಕರ ಭೇಟಿ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆ ಆರಂಭವಾಗುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ವಲಯದಲ್ಲಿ ಸಿಎಂ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಈಗಾಗಲೇ ವಿಪಕ್ಷಗಳು ಕೂಡ ಮುಖ್ಯಮಂತ್ರಿಗಳ ರಾಜೀನಾಮೆಗೆ ಪಟ್ಟು ಹಿಡಿದಿದೆ. ಈ ನಡುವೆ ಡಿಕೆಶಿ-ಪರಂ ಭೇಟಿ ಕುತೂಹಲ ಮೂಡಿಸಿದೆ. ಮೊನ್ನೆಯಷ್ಟೇ ಕನಕಪುರದಲ್ಲಿ ಮಾತನಾಡುವ ವೇಳೆ ಡಿಸಿಎಂ ಡಿಕೆಶಿ , ತಾವು ಕೂಡ ಸಿಎಂ ಸ್ಥಾನದ ಪ್ರಬಲ ಆಕಾಂಕ್ಷಿ ಎಂದು ಹೇಳಿದ್ದರು.
Poll (Public Option)

Post a comment
Log in to write reviews