
ಬೆಂಗಳೂರು: ರಾಜ್ಯದಲ್ಲಿ ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಹೀಗಾಗಿ ಮತ್ತೆ ಪಾನಮಾಡಿ ವಾಹನ ಚಲಾಯಿಸುವವರು ಮತ್ತು ಅತೀ ವೇಗವಾಗಿ ವಾಹನ ಚಲಾಯಿಸುವವರ ಚಾಲನಾ ಪರವಾನಗಿ ರದ್ದುಪಡಿಸಲು ಅಗತ್ಯ ಕ್ರಮಕೈಗೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರಿಗೆ ಇಲಾಖೆಗೆ ಸೂಚನೆ ನೀಡಿದ್ದಾರೆ.
ವಿಧಾನಸೌಧ ಆವರಣದಲ್ಲಿ 65 ಅತ್ಯಾಧುನಿಕ ಜೀವ ರಕ್ಷಕ ಸೌಲಭ್ಯವುಳ್ಳ ಆಂಬುಲೆನ್ಸ್ ಸೇವೆಗೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರ ರಸ್ತೆ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಅಪಘಾತಗಳಿಂದ ಉಂಟಾಗುವ ಸಾವು ತಡೆಯಲು ವಿವಿಧ ಕಾರ್ಯಕ್ರಮ ಹಾಕಿಕೊಂಡಿದೆ. ಇಂತಹ ಕಾರ್ಯಕ್ರಮಗಳಿಗೆ ಸಾರ್ವಜನಿಕರೂ ಸಹ ರಸ್ತೆ ಸುರಕ್ಷತಾ ನಿಯಮ ಪಾಲಿಸುವ ಮೂಲಕ ಸಹಕರಿಸಬೇಕು. ವೇಗವಾಗಿ ವಾಹನ ಚಾಲನೆ ಮಧ್ಯಪಾನ ಸೇವಿಸಿ ವಾಹನ ಚಲಾಯಿಸುವವರ ಪರವಾನಗಿ ರದ್ದುಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಸೂಚಿಸಿದರು.
Poll (Public Option)

Post a comment
Log in to write reviews