
ಮಂಗಳೂರು: ಕಾಸ್ಮೆಟಿಕ್ ಸರ್ಜರಿಯ ವೇಳೆ ವೈದ್ಯರ ಎಡವಟ್ಟಿನಿಂದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಕಂಕನಾಡಿಯ ಬೆಂದೂರ್ ವೆಲ್ನಲ್ಲಿ ನಡೆದಿದೆ.
ಮೃತನನ್ನು ಉಳ್ಳಾಲದ ಅಕ್ಕರೆಕೆರೆ ನಿವಾಸಿಯಾಗಿದ್ದು 32 ವರ್ಷದ ಮೊಹ್ಮದ್ ಮಾಝಿನ್ ಎಂದು ಗುರುತಿಸಲಾಗಿದೆ. ಮೊಹ್ಮದ್ ಮಾಝಿನ್ ತನ್ನ ಎದೆಯ ಎಡಭಾಗದ ಸಣ್ಣ ಗುಳ್ಳೆಯನ್ನು ತೆಗೆಸಲು ಬೆಂದೂರ್ ವೆಲ್ನಲ್ಲಿರುವ ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ ಪರೆಂಟ್ ಕ್ಲಿನಿಕ್ಗೆ ಬಂದಿದ್ದನು.
ಸಣ್ಣ ಶಸ್ತ್ರಚಿಕಿತ್ಸೆ ಮಾಡಬೇಕಿತ್ತು. ಆದರೆ ಹೆಚ್ಚು ಸಮಯ ಕಳೆದರೂ ಶಸ್ತ್ರಚಿಕಿತ್ಸೆ ಮುಗಿಯದಿದ್ದರಿಂದ ಸಂಶಯಗೊಂಡ ಪೋಷಕರು ಈ ಬಗ್ಗೆ ವಿಚಾರಿಸಿದಾಗ ಆರೋಗ್ಯದಲ್ಲಿ ಏರುಪೇರು ಆಗಿರುವ ಮಾಹಿತಿ ಬೆಳಕಿಗೆ ಬಂದಿದೆ. ಕೂಡಲೇ ಮಾಝೀನ್‌ನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಅಷ್ಟರಲ್ಲಿ ಆತ ಮೃತಪಟ್ಟಿರುವುದಾಗಿ ಘೋಷಿಸಿದರು.
ಸರ್ಜರಿಯ ವೇಳೆ ವೈದ್ಯರು ಎಡವಟ್ಟು ಮಾಡಿಕೊಂಡಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದು, ಈ ಕುರಿತು ಕದ್ರಿ ಠಾಣೆ ಪೊಲೀಸರು UDR ಪ್ರಕರಣ ದಾಖಲಿಸಿಕೊಂಡಿದ್ದಾರೆ.
Poll (Public Option)

Post a comment
Log in to write reviews