
ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಕೇಂದ್ರ ಸಂಪುಟದಲ್ಲಿ ಈ ಬಾರಿ ಆಹಾರ ಮತ್ತು ಗ್ರಾಹಕ ವ್ಯವಹಾರ ಖಾತೆ ನೀಡಲಾಗಿದೆ.
ಎನ್ ಡಿಎ ಸರ್ಕಾರದಲ್ಲಿ ಎರಡನೇ ಬಾರಿ ಕ್ಯಾಬಿನೆಟ್ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಲ್ಹಾದ ಜೋಶಿಗೆ ಈ ಬಾರಿ ಹೊಸ ಹೊಣೆಗಾರಿಕೆ ನೀಡಿದ್ದಾರೆ. ಪ್ರಲ್ಹಾದ್ ಜೋಶಿ ಅವರಿಗೆ ಆಹಾರ ಮತ್ತು ಗ್ರಾಹಕ ವ್ಯವಹಾರ ಖಾತೆ ಜತೆಗೆ ನವೀಕರಿಸಬಹುದಾದ ಇಂಧನ ಖಾತೆ ನೀಡಲಾಗಿದೆ. ಮೋದಿ ಅವರ ಎರಡನೇ ಅವಧಿಯಲ್ಲಿ ಪ್ರಲ್ಹಾದ ಜೋಶಿ ಅವರು ಸಂಸದೀಯ ವ್ಯವಹಾರ ಮತ್ತು ಕಲ್ಲಿದ್ದಲು, ಗಣಿ ಖಾತೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು. ಅವರ ಈ ಹಿಂದಿನ ಕಾರ್ಯಗಳನ್ನು ಪ್ರಶಂಶಿಸಿ ಈ ಬಾರಿ ಮೋದಿ ಅವರು ಆಹಾರ ಮತ್ತು ಗ್ರಾಹಕ ವ್ಯವಹಾರ ಖಾತೆ ಜತೆಗೆ ನವೀಕರಿಸಬಹುದಾದ ಇಂಧನ ಖಾತೆ ನೀಡಿದ್ದಾರೆ ಎನ್ನಲಾಗಿದೆ.
Poll (Public Option)

Post a comment
Log in to write reviews