
ತವರು ಮನೆಯಿಂದ ವರದಕ್ಷಿಣೆ ತರದ್ದಕ್ಕೆ ಗಂಡನ ಮನೆಯವರು ಗೃಹಿಣಿಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಅಮಾನವೀಯ ಬಲಿಯಾದ ಗೃಹಿಣಿ.
ಎರಡೂ ವರ್ಷದ ಹಿಂದೆ ಮಹಮ್ಮದ್ ಅಜರುದ್ದೀನ್ ಎಂಬಾತನೊಂದಿಗೆ ಹೀನಾ ಮದುವೆಯಾಗಿತ್ತು. ಕೆಲವು ದಿನಗಳ ನಂತರ ಮಹಮ್ಮದ್ ಕುಟುಂಬಸ್ಥರು ಹೀನಾಗೆ ವರದಕ್ಷಿಣೆ ತರುವಂತೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು. ಈ ಹಿಂದೆ ಹಲವು ಬಾರಿ ಮಹಮ್ಮದ್ ಕುಟುಂಬಸ್ಥರಿಗೆ ಹಿರಿಯರು ಬುದ್ಧಿವಾದ ಹೇಳಿದ್ದರು. ನಿನ್ನೆ ವರದಕ್ಷಿಣೆ ತರುವಂತೆ ಹೀನಾಳೊಂದಿಗೆ ಮಹಮ್ಮದ್ ಕುಟುಂಬಸ್ಥರು ಜಗಳವಾಡಿದ್ದರು. ಗಂಡ ಮಹಮ್ಮದ್ ಅಜರುದ್ದೀನ್, ಅತ್ತೆ ಫರಿದಾಬಾನು, ಮಾವ ಕರೀಮ್ಸಾಬ್, ಹಾಗೂ ನಾದಿನಿ ಶಬ್ಬೋ ಸೇರಿ ಆಕೆಯನ್ನು ಕತ್ತು ಹಿಸುಕಿ ಕೊಂದಿದ್ದಾರೆ ಎಂದು ಆರೋಪಿಸಿ ಹೀನಾ ತಂದೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.
Poll (Public Option)

Post a comment
Log in to write reviews