
ಮಂಡ್ಯ: ಒಂದೇ ಶಾಲೆಯ ಹತ್ತಾರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಡಿ ಸರ್ಕಾರಿ ಪ್ರೌಢ ಶಾಲೆ ಶಾಲೆಯ ಹಳೆಯ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿರುವ ಘಟನೆ ಮಂಡ್ಯದಲ್ಲಿ ಬೆಳಕಿಗೆ ಬಂದಿದೆ.
ಮೇಲುಕೋಟೆ ಸರ್ಕಾರಿ ಪ್ರೌಢ ಶಾಲೆಯ ಯೋಗಿ ಎಂಬ ಹಳೇ ವಿದ್ಯಾರ್ಥಿಯೊಬ್ಬ ತನ್ನ ಶಾಲೆಯ ಮಕ್ಕಳಿಗೆ ಚಿತ್ರಕಲೆ, ಕ್ರೀಡೆ ಹೇಳಿಕೊಡುವ ನೆಪದಲ್ಲಿ ಮಕ್ಕಳನ್ನು ಬಳಸಿಕೊಂಡು ಹೀನ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಅಣ್ಣನಂತೆ ನಂಬಿಸಿ ಅಪ್ರಾಪ್ತ ವಿದ್ಯಾರ್ಥಿನಿಯರ ನಗ್ನ ಫೋಟೋ ತೆಗೆದು ಬ್ಲಾಕ್ ಮೇಲ್ ಮಾಡಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಮೇಲುಕೋಟೆ ಠಾಣಾ ವ್ಯಾಪ್ತಿಯ ಸರ್ಕಾರಿ ಪ್ರೌಢ ಶಾಲೆಯೊಂದರ ಹಲವು ಅಪ್ರಾಪ್ತ ಬಾಲಕಿಯರಿಗೆ ಆರೋಪಿ ಯೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಸದ್ಯ ನೊಂದ ನಾಲ್ವರು ಬಾಲಕಿಯರು ಘಟನೆ ಸಂಬಂಧ ದೂರು ನೀಡಿದ್ದು, ದೂರಿನನ್ವಯ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆ ಪೊಲೀಸರು ಎಫ್ಐಆರ್ ದಾಖಲಿಸಿ ಯೋಗಿಯನ್ನು ಬಂಧಿಸಿದ್ದಾರೆ.
Poll (Public Option)

Post a comment
Log in to write reviews