
ವಿಧಾನ ಪರಿಷತ್ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್‌ನಲ್ಲಿ ಆಂತರಿಕ ಕಲಹ ಬೀದಿಗೆ ಬಿದ್ದಿದೆ. ಈ ವಿಚಾರದಲ್ಲಿ ಡಾ ಪರಮೇಶ್ವರ ಅವರು ಸಿಎಂ, ಡಿಸಿಎಂ ವಿರುದ್ಧ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಅವರಿಬ್ಬರೇ ತೀರ್ಮಾನ ಮಾಡಿದ್ರೆ ಸರಿಯಲ್ಲ ಎಂದು ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ಪಕ್ಷದ ಹಿರಿಯ ನಾಯಕರ ಸಲಹೆ, ಅಭಿಪ್ರಾಯಗಳನ್ನೂ ಕೇಳಬೇಕು. ಯಾರು ಹಿರಿಯ ಅನುಭವಿ ನಾಯಕರು ಇದ್ದಾರೆ. ಅವರ ಜೊತೆ ಚರ್ಚೆ ಮಾಡಿದರೆ ಒಳ್ಳೆಯದು ಎಂದು ಪರಮೇಶ್ವರ ಹೇಳಿದ್ದಾರೆ.
ಪಕ್ಷದಲ್ಲಿ ಅನೇಕ ವರ್ಷ ದುಡಿದ ನಾಯಕರು ಹಿರಯರ ಸಲಹೆ ಪಡೆಯಬೇಕು. ಜಾತಿವಾರು, ಪ್ರಾದೇಶಿಕವಾರು, ಪಕ್ಷಕ್ಕೆ ದುಡಿದವರಿಗೆ ಸ್ಥಾನ ಕೊಡಬೇಕು ಎಂದು ಅವರು ಅಸಮಾಧಾನ ಹೊರ ಹಾಕಿದ್ದಾರೆ.
Poll (Public Option)

Post a comment
Log in to write reviews