
ಚಿಕ್ಕಮಗಳೂರು: ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆ ಡ್ರೆಸ್‌ಕೋಡ್‌ಜಾರಿ ಮಾಡಲಾಗಿದೆ. ಶೃಂಗೇರಿ ಬಳಿಕ ಈಗ ಹೊರನಾಡಲ್ಲೂ ಡ್ರೆಸ್‌ಕೋಡ್ ಜಾರಿಗೆ ಬಂದಿದೆ.
ಗಂಡಸರು ಶಲ್ಯ, ಪ್ಯಾಂಟ್,ಪಂಚೆ, ಹೆಣ್ಣು ಮಕ್ಕಳು ಸೀರೆ ಹಾಗೂ ಚೂಡಿದಾರ ಧರಿಸುವಂತೆ ಸೂಚನೆ ನೀಡಲಾಗಿದೆ. ಸಾಂಪ್ರದಾಯಿಕ ಉಡುಗೆಯಲ್ಲಿ ಬರದಿದ್ದರೆ ದೇವಸ್ಥಾನದ ಒಳಗೆ ಪ್ರವೇಶವಿಲ್ಲ ಎಂದು ದೇವಾಲಯದ ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ಅನ್ನಪೂರ್ಣೇಶ್ವರಿ ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆ ಕಡ್ಡಾಯವಾಗಿದ್ದು, ಭಕ್ತರು ಸಹಕರಿಸುವಂತೆ ದೇವಾಲಯ ಆಡಳಿತ ಮಂಡಳಿ ಮನವಿ ಮಾಡಿದೆ. ಇತ್ತೀಚೆಗೆ ತುಂಡುಡುಗೆ ಧರಿಸಿ ಬರುವವರ ಸಂಖ್ಯೆ ಅಧಿಕವಾಗಿದರಿಂದ ಸಾಕಷ್ಟು ಭಕ್ತರು ಮುಜುಗರ ಪಡುವಂತಾಗಿದ್ದು, ಈ ಹಿನ್ನೆಲೆಯಲ್ಲಿ ದೇವಾಲಯ ಆಡಳಿತ ಮಂಡಳಿ ಈ ಕ್ರಮ ತೆಗೆದುಕೊಂಡಿದ್ದಾರೆ.
Poll (Public Option)

Post a comment
Log in to write reviews