
ಮೈಸೂರು: ಈ ಬಾರಿ ನಾಡಹಬ್ಬ ದಸರಾದಲ್ಲಿ ಭಾಗವಹಿಸುವ ಅಭಿಮನ್ಯು ನೇತೃತ್ವದ 9 ಗಜಪಡೆಗೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಹೆಬ್ಬಾಗಿಲು ವೀರನ ಹೊಸಹಳ್ಳಿಯಲ್ಲಿ ಇಂದು ಬೆಳಗ್ಗೆ 10.20 ರಿಂದ 10.45ರ ತುಲಾ ಶುಭಲಗ್ನದಲ್ಲಿ ಗಣ್ಯರಿಂದ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಮೊದಲ ಹಂತದ ಗಜ ಪಯಣಕ್ಕೆ ಚಾಲನೆ ನೀಡಲಾಯಿತು.
ಅರಣ್ಯ ಸಚಿವ ಈಶ್ವರ್ ಖಂಡ್ರೆ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ, ಅರಣ್ಯಾಧಿಕಾರಿಗಳು ಗಜಪಡೆಗೆ ಪುಷ್ಪಾರ್ಚನೆ ಮಾಡಿದರು. ಬಳಿಕ ಆನೆ ಮಾವುತರಾದಂತಹ ಕಾವಾಡಿಗಳಿಗೆ ವೇದಿಕೆ ಕಾರ್ಯಕ್ರಮದಲ್ಲಿ ಸನ್ಮಾನ ಮಾಡಲಾಯಿತು. ಇದಕ್ಕೂ ಮುನ್ನ ಸಾಂಸ್ಕೃತಿಕ ಕಾರ್ಯಕ್ರಮಗಳು, ಕಲಾ ತಂಡಗಳು, ಹಾಗೂ ಹಾಡಿ ಜನರ ಸಾಂಪ್ರದಾಯಿಕ ನೃತ್ಯಗಳು ಗಜಪಯಾಣಕ್ಕೆ ಮೆರಗು ತಂದವು.
ಗಜಪಯಣದ ಮೂಲಕ ಆಗಮಿಸಿದ 9 ಆನೆಗಳು: ಅಭಿಮನ್ಯು (58), ಭೀಮ (24), ಗೋಪಿ (41), ಧನಂಜಯ (43), ಕಂಜನ್ (25), ರೋಹಿತ್ (22), ಲಕ್ಷ್ಮೀ (53), ವರಲಕ್ಷ್ಮಿ (67), ಏಕಲವ್ಯ (38) ಆನೆಗಳು ಮೊದಲ ಗಜ ಪಯಣದಲ್ಲಿ ಮೈಸೂರಿಗೆ ಬರಲಿವೆ.
Poll (Public Option)

Post a comment
Log in to write reviews