
ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯರಪ್ಪನಹಳ್ಳಿ ಗ್ರಾಮದಲ್ಲಿ ಬಂಧಿಸಿದ್ದಾರೆ. ಸದ್ಯ ಬಂಧಿತರಿಂದ ಒಂದು ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. ಇನ್ನೂ ಆಫ್ರಿಕಾ ಮೂಲದ ಮೈಕಲ್ ಓಕೆಲಿ, ಮತ್ತು ಬೆಂಗಳೂರಿನ ಸಹನಾ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.
ಆರೋಪಿ ಮೈಕೆಲ್ ಭಾರತಕ್ಕೆ ಬಂದು, ಕೆ.ಆರ್.ಪುರಂನಲ್ಲಿ ಬಾಡಿಗೆ ಮನೆ ಮಾಡಿಕೊಂಡು ಇದ್ದನು. ಸಹನಾ ಮತ್ತು ಮೈಕಲ್ ಸ್ನೇಹಿತರಾಗಿದ್ದು, ಒಟ್ಟಿಗೆ ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದರು. ನಂತರ, ಮೈಕಲ್ ಮತ್ತು ಸಹನಾ ಒಟ್ಟಿಗೆ ಕೆಆರ್ಪುರಂನಿಂದ ಯರಪ್ಪನಹಳ್ಳಿ ಗ್ರಾಮಕ್ಕೆ ಶಿಫ್ಟ್ ಆಗಿದ್ದಾರೆ. ಇಲ್ಲಿಂದಲೇ ಡ್ರಗ್ಸ್ ಸರಬರಾಜು ಮಾಡಲು ಆರಂಭಿಸಿದರು.
ಆರೋಪಿ ಯರಪ್ಪನಹಳ್ಳಿ ಗ್ರಾಮದಲ್ಲಿರುವ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಆತನ ಮನೆ ಮೇಲೆ ದಾಳಿ ನಡೆಸಿ ಇಬ್ಬರನ್ನೂ ಬಂಧಿಸಿದ್ದಾರೆ. ಸದ್ಯ ಬಂಧಿತರಿಂದ ಒಂದು ಕೆಜಿಗೂ ಅಧಿಕ ಎಂಡಿಎಂಎ, ಮೂರು ಮೊಬೈಲ್, ಎರಡು ಎಲೆಕ್ಟ್ರಾನಿಕ್ ತೂಕದ ಯಂತ್ರವನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Poll (Public Option)

Post a comment
Log in to write reviews