
ಬೆಂಗಳೂರು: ನಗರ ಸಂಚಾರ ಪೋಲಿಸರು ಡ್ರಂಕ್ & ಡ್ರೈವ್ ತಪಾಸಣೆ ಚುರುಕುಗೊಳಿಸಿದ್ದು, ಆಗಸ್ಟ್ ತಿಂಗಳಲ್ಲಿ 2030 ಪಾನಮತ್ತ ಚಾಲಕರು, ಸವಾರರ ವಿರುದ್ಧ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.
ನಗರದಲ್ಲಿ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ನಗರ ಸಂಚಾರ ಪೊಲೀಸರು ಕಳೆದ ಆ. 1 ರಿಂದ 31ರ ವರೆಗೆ ನಗರದ 50 ಸಂಚಾರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು. ಈ ಎಲ್ಲಾ ವಾಹನ ಚಾಲಕರ ಚಾಲನಾ ಪರವಾನಿಗೆ ರದ್ದುಗೊಳಿಸಲು ಸಾರಿಗೆ ಇಲಾಖೆ ಶಿಫಾರಸ್ಸು ಮಾಡಲಾಗಿದೆ. ಈ ವಿಶೇಷ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂ.ಎನ್.ಅನುಚೇತ್ ತಿಳಿಸಿದ್ದಾರೆ.
Poll (Public Option)

Post a comment
Log in to write reviews