
“ರಾಚಯ್ಯ” ಎಂದು ಹೊಸ ಚಿತ್ರಕ್ಕೆ ಟೈಟಲ್ ಫೀಕ್ಸ್ ಮಾಡಿದ ದುನಿಯಾ ವಿಜಯ್
ಸಾರಥಿ ಚಿತ್ರವನ್ನು ನಿರ್ಮಿಸಿದ್ದ ಕೆ.ವಿ.ಸತ್ಯಪ್ರಕಾಶ್ ಅವರ ಪುತ್ರ ಸೂರಜ್ ಗೌಡ ಅವರ ಜೋತೆಗೆ ಹನ್ನೆರಡು ವರ್ಷಗಳ ನಂತರ ಸಾರಥಿ ಫಿಲಂಸ್ ಮೂಲಕ ನೂತನ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ. ದುನಿಯಾ ವಿಜಯ್ ನಾಯಕ ನಟನಾಗಿ ನಟಿಸಿರುವ ಈ ಚಿತ್ರಕ್ಕೆ ಈಗ ರಾಚಯ್ಯ ಅನ್ನೋ ಟೈಟಲ್ ಫಿಕ್ಸ್ ಮಾಡಲಾಗಿದೆ. ಈ ಚಿತ್ರವನ್ನು ಜಂಟಲ್ ಮ್ಯಾನ್, ಗುರುಶಿಷ್ಯರು ಚಿತ್ರಗಳ ನಿರ್ದೇಶಕ ಹಾಗೂ ಕಾಟೇರ ಚಿತ್ರದ ಲೇಖಕ ಜಡೇಶ್.ಕೆ ಹಂಪಿ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ.
ದುನಿಯಾ ವಿಜಯ್ ಪುತ್ರಿ ರಿತನ್ಯ(ಮೋನಿಕಾ) ಈ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ರಚಿತಾರಾಮ್ ಈ ಚಿತ್ರದ ನಾಯಕಿಯಾಗಿ ನಟಿಸುತ್ತಿದ್ದು. ಡೇರ್ ಡೆವಿಲ್ ಮುಸ್ತಫಾ ಖ್ಯಾತಿಯ ಶಿಶಿರ್ ಸಹ ಪ್ರಮುಖಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ತಂದೆ – ಮಗ ಮತ್ತು ತಂದೆ – ಮಗಳು ಅಭಿನಯಿಸುತ್ತಿರುವುದು ಈ ಚಿತ್ರದ ವಿಶೇಷತೆ. ನಾನು ಚಿತ್ರರಂಗಕ್ಕೆ ಬಂದು ಮೂವತ್ತು ವರ್ಷ ಹಾಗೂ ನಾಯಕನಾಗಿ ಹದಿನೆಂಟು ವರ್ಷಗಳಾಗಿದೆ. ಈ ಸಂದರ್ಭದಲ್ಲಿ ನನ್ನ ಮಗಳು ಚಿತ್ರರಂಗಕ್ಕೆ ಪ್ರವೇಶಿಸುತ್ತಿದ್ದಾಳೆ. ಒಬ್ಬ ತಂದೆ ಮಗಳಿಗಾಗಿ ಏನೆಲ್ಲಾ ಕೊಡಬಹುದು? ಹಾಗೆ ಚಿತ್ರದ ಸ್ಕ್ರಿಪ್ಟ್ ನಲ್ಲಿ ಅರ್ಧಭಾಗವನ್ನು ಮಗಳಿಗೆ ಕೊಡಲಾಗಿದೆ ಎಂದು ವಿಜಿ ತಿಳಿಸಿದ್ದಾರೆ. ನಿರ್ದೇಶಕ ಜಡೇಶ್ ಅವರು ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ನನ್ನ ಪಾತ್ರ ಕೂಡ ಚೆನ್ನಾಗಿದೆ. ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದಿದ್ದಾರೆ ನಾಯಕ ದುನಿಯಾ ವಿಜಯ್.
Poll (Public Option)

Post a comment
Log in to write reviews