
ಮಂಗಳೂರು: ಮೋದಿ ಪ್ರಧಾನಿ ಪ್ರಮಾಣವಚನ ಸ್ವೀಕಾರ ಹಿನ್ನಲೆ ವಿಜಯೋತ್ಸವ ಕಾರ್ಯಕ್ರಮದಲ್ಲಿ ಚಾಕುವಿನಿಂದ ಹಲ್ಲೆಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಬೊಳಿಯಾರ್ನಲ್ಲಿ ನಡೆದಿದೆ. ವಿಜಯೋತ್ಸವದ ಸಲುವಾಗಿ ಹಮ್ಮಿಕೊಂಡಿದ್ದ ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ಮೆರವಣಿಗೆ ಮುಗಿದ ನಂತರ ಚಾಕುವಿನಿಂದ ಹಲ್ಲೆ ಮಾಡಲಾಗಿದೆ. ಸುಮಾರು 15 ಕ್ಕೂ ಹೆಚ್ಚು ಯುವಕರು ನಡು ರಸ್ತೆಯಲ್ಲಿ ಇಬ್ಬರು ಕಾರ್ಯಕರ್ತರನ್ನು ಒಡಾಡಿಸುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಬಾರಿ ಸುದ್ದಿಯಾಗುತ್ತಿದೆ. ಬೋಳಿಯಾರ್ ನಿವಾಸಿಗಳಾದ ಹರೀಶ್ ಮತ್ತು ನಂದ ಕುಮಾರ್ ಇಬ್ಬರ ಮೇಲೆ ಹಲ್ಲೆ ನಡೆಸಲಾಗಿದ್ದು, ಇಬ್ಬರಿಗೂ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Poll (Public Option)

Post a comment
Log in to write reviews