
ದಸರಾ ಆನೆ ಅರ್ಜುನ ಮೃತಪಟ್ಟು ಐದು ತಿಂಗಳು ಕಳೆದರೂ ಸಹ ಸರ್ಕಾರ ಮಾತ್ರ ಸ್ಮಾರಕ ನಿರ್ಮಾಣಕ್ಕೆ ಮುಂದಾಗಿಲ್ಲ. ಆದರೆ ಅರ್ಜುನ ಆನೆ ಸ್ಮಾರಕ ನಿರ್ಮಾಣ ಮಾಡುವ ವಿಚಾರವನ್ನು ಬಂಡವಾಳ ಮಾಡಿಕೊಂಡಿರುವ ವ್ಯಕ್ತಿಯೊಬ್ಬ ಅಕ್ರಮವಾಗಿ ಹಣ ಸಂಗ್ರಹಿಸುತ್ತಿರುವ ಆರೋಪ ಕೇಳಿಬಂದಿದೆ.
ಅರ್ಜುನ ಸ್ಮಾರಕ ಹೋರಾಟಕ್ಕೆ ನಿಮ್ಮ ಬೆಂಬಲ ಬೇಕು ಅಂತ ಮೈಸೂರು ಜಿಲ್ಲೆಯ ನವೀನ್ ಹೆಚ್.ಎನ್ ಎಂಬುವವನು ಅರ್ಜುನಪಡೆ ಎಂಬ ವಾಟ್ಸ್‌ಆಪ್ ಗ್ರೂಪ್ ಕ್ರಿಯೇಟ್ ಮಾಡಿ, ಹಣ ಸಹಾಯ ಕೇಳುತ್ತಿದ್ದಾನೆ. ಇದನ್ನು ನಂಬಿದ ಹಲವರು ಧನ ಸಹಾಯ ಮಾಡಿದ್ದಾರೆ. ಇದರಿಂದ ನವೀನ್ ಖಾತೆಗೆ ಲಕ್ಷಾಂತರ ಹಣ ಜಮೆ ಆಗಿದೆ, ಈತ ಹಣ ಸಂಗ್ರಹಿಸಿದ ಬಗ್ಗೆ ದೂರು ದಾಖಲಾಗಿದೆ. ಅರ್ಜುನ ಆನೆ ಸ್ಮಾರಕ ನಿರ್ಮಾಣಕ್ಕೆ ಸಹಾಯ ಮಾಡುವಂತೆ ನವೀನ್ ನಟ ದರ್ಶನ್ ಅವರ ಆಪ್ತ ಸಹಾಯಕರನ್ನು ಸಂಪರ್ಕ ಮಾಡಿ, ಅವರಿಂದ ಕಲ್ಲನ್ನು ತೆರೆಸಿಕೊಂಡಿದ್ದಾನೆ. ಈ ಕಲ್ಲನ್ನು ಅರಣ್ಯ ಇಲಾಖೆಯವರಿಗೆ 30 ಸಾವಿರ ರೂ.ಗೆ ಮಾರಿದ್ದಾನೆ ಅಂತ ಆರೋಪ ಕೇಳಿಬಂದಿದೆ. ಸಾರ್ವಜನಿಕರಿಂದ ಹಣ ಪಡೆಯುವುದಕ್ಕೆ ಈತನಿಗೆ ಅನುಮತಿ ಕೊಟ್ಟವರು ಯಾರು? ಈತನ ವೈಯಕ್ತಿಕ ಖಾತೆಗೆ ಯಾರೂ ಹಣ ಹಾಕಬೇಡಿ. ಅಲ್ಲದೆ ಈತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಈತನ ಖಾತೆಗೆ ನೂರಾರು ಜನರು ಹಣ ಸಂದಾಯ ಮಾಡಿರುವ ಫೊಟೋಗಳು ವೈರಲ್ ಆಗಿವೆ ಎಂದು ಮಲೆನಾಡು ರಕ್ಷಣಾ ವೇದಿಕೆ ಅಧ್ಯಕ್ಷ ಆರೋಪಿಸಿದ್ದಾರೆ.
Poll (Public Option)

Post a comment
Log in to write reviews