
ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯು ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20ರ ತನಕ ದಸರಾ ರಜೆ ಘೋಷಿಸಿದ್ದು, ನಾಳೆಯಿಂದಲೇ ಮಕ್ಕಳಿಗೆ ದಸರಾ ರಜೆ ಆರಂಭವಾಗಲಿದೆ. ಒಟ್ಟು 17 ದಿನ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆ ಇರಲಿದೆ.
2024-25ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಅಕ್ಟೋಬರ್ 3 ರಿಂದ 20 ರವರೆಗೆ ಇರಲಿದೆ. ಇನ್ನು ದಸರಾ ರಜೆ ಬಳಿಕ ಅಕ್ಟೋಬರ್ 21ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ಶಾಲೆ ನಡೆಯಲಿದೆ. 2024- 2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ.
Poll (Public Option)

Post a comment
Log in to write reviews