
ಹುಬ್ಬಳ್ಳಿ: ಬೆಳ್ಳಂಬೆಳಗ್ಗೆ ಡಕಾಯಿತಿ ಗ್ಯಾಂಗ್ನ್ನ ಒರ್ವ ಸದಸ್ಯನ ಮೇಲೆ ಗೋಕುಲ ರೋಡ್ ಪೊಲೀಸರು ಗುಂಡು ಹಾರಿಸಿ, ಬಂಧಿಸಿದ್ದಾರೆ. ಮಹೇಶ್ ಸೀತಾರಾಮ್ ಕಾಳೆ ಬಂಧಿತ ವ್ಯಕ್ತಿ ಎಂದು ಗುರುತಿಸಲಾಗಿದೆ. ಮಹೇಶ್ ಮತ್ತು ಈತನ ಗ್ಯಾಂಗ್ ಮನೆ ಕಳ್ಳತನಕ್ಕೆ ಇಳಿದಿತ್ತು. ವಿಚಾರ ತಿಳಿದು ಕಾರ್ಯಾಚರಣೆಗೆ ಇಳಿದ ಪೊಲೀಸರು ಆರೋಪಿ ಮಹೇಶ್ ಸೀತಾರಾಮ್ನನ್ನು ಬಂಧಿಸುವಲ್ಲಿ ಯಶಸ್ವಿಯಾದರು. ಉಳಿದ ಖದೀಮರು ಪರಾರಿಯಾಗಿದ್ದು, ಉಳಿದ ಡಕಾಯಿತರು ಇರುವ ಸ್ಥಳ ತೋರಿಸುತ್ತೇನೆ ಅಂತ ಮಹೇಶ್ ಪೊಲೀಸರನ್ನು ಕರೆದುಕೊಂಡು ಹೋಗಿದ್ದಾನೆ. ಡಕಾಯಿತರು ಇದ್ದ ಸ್ಥಳಕ್ಕೆ ಹೋದ ಬಳಿಕ ಮಹೇಶ್ ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಮುಂದಾಗಿದ್ದಾನೆ.
ಪ್ರಾಣ ರಕ್ಷಣೆಗಾಗಿ ಗೋಕುಲ ರೋಡ್ ಪೊಲೀಸ್ ಠಾಣೆಯ ಪಿಎಸ್ಐ ಸಚಿನ ದಾಸರೆಡ್ಡಿ ಮಹೇಶ್ ಕಾಲಿಗೆ ಗುಂಡು ಹಾರಿಸಿದ್ದಾರೆ. ಗುಂಡು ತಿಂದು ನೋವಿನಿಂದ ಒದ್ದಾಡುತ್ತಿದ್ದ ಮಹೇಶ್ನನ್ನು ಹುಬ್ಬಳ್ಳಿ ಕಿಮ್ಸ್ಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಗೋಕುಲ ರೋಡ್ ಪೊಲೀಸ್ ಠಾಣೆಯ ಪಿಎಸ್ಐ ಸಚಿನ್ ಮತ್ತು ಪೇದೆ ವಸಂತ ಗುಡಿಗೇರಿಗೆ ಅವರಿಗೆ ಗಾಯವಾಗಿದೆ.
Poll (Public Option)

Post a comment
Log in to write reviews