
ಶಿಕ್ಷಣ ಸಚಿವ ಮಧು ಬಂಗಾರಪ್ಪ ಕನ್ನಡ ಮಾತಾಡಲು ಬರಲ್ಲ ಎಂದು ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಕ್ಕೂ ಬರ ಬಂದಿದೆ. 20 ಕೃಪಾಂಕ ನೀಡಿ ವಿದ್ಯಾರ್ಥಿಗಳನ್ನು ಪಾಸ್ ಮಾಡಿದ್ದಾರೆ. ಹೀಗೆ ಓದುವುದನ್ನೂ ಉಚಿತ ಮಾಡಿ ಓದದೆಯೇ ಪಾಸು ಮಾಡುವ ಯೋಜನೆ ತಂದಿದ್ದಾರೆ. ಹಾಗಾದರೆ ಕಷ್ಟಪಟ್ಟು ಓದಿದ ವಿದ್ಯಾರ್ಥಿಗಳಿಗೆ ಬೆಲೆ ಇಲ್ಲವೇ? ಸಿಇಟಿ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳನ್ನು ಕೇಳಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿದ್ದಾರೆ. ಈ ಸರ್ಕಾರ ಶಿಕ್ಷಣ ಇಲಾಖೆಗೆ ಅನುದಾನ ಕಡಿಮೆ ಮಾಡಿ ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಮಣಿವಣ್ಣನ್ ಎಂಬ ಅಧಿಕಾರಿ ಕುವೆಂಪು ವಾಣಿಯನ್ನು ತಿದ್ದುವಂತಹ ಸ್ಥಿತಿ ಇದೆ ಎಂದರು.
Poll (Public Option)

Post a comment
Log in to write reviews