
ಮೈಸೂರು; ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕಡಿಮೆ ಮತದಾನವಾದರೆ ಅದಕ್ಕೆ ಚುನಾವಣಾ ಆಯೋಗವೇ ನೇರ ಹೊಣೆ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಹಾಗೂ ಫಲಿತಾಂಶ ಮುಂದಿಟ್ಟುಕೊಂಡು ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಯುತ್ತಿರುವುದು ಸೂಕ್ತವಲ್ಲ. ಮತಯಾಚನೆಗೂ ಅವಕಾಶ ಕೊಡದೆ ತರಾತುರಿಯಲ್ಲಿ ಚುನಾವಣೆ ಘೋಷಣೆ ಮಾಡಿರುವುದು ಖಂಡನೀಯ ಎಂದರು.
ಈ ವೇಳೆಯಲ್ಲಿ ಪದವೀಧರ ಕ್ಷೇತ್ರಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಕಡಿಮೆ ಮತದಾನವಾದರೆ ಅದಕ್ಕೆ ಕೇಂದ್ರ ಚುನಾವಣಾ ಆಯೋಗವೇ ನೇರ ಹೊಣೆ. ಲೋಕಸಭಾ ಚುನಾವಣೆ ಮತ ಎಣಿಕೆ ದಿನಗಳಲ್ಲೇ ಶಿಕ್ಷಕ ಮತ್ತು ಪದವೀಧರ ಕ್ಷೇತ್ರದ ಚುನಾವಣೆ ನಡೆಸುತ್ತಿರುವುದು ಆಯೋಗದ ಒಂದು ಹುನ್ನಾರ ಎಂದರು.
ಶಿಕ್ಷಕ ಮತದಾರರು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನ ಗೆಲ್ಲಿಸಿಕೊಡಬೇಕು. ಶಿಕ್ಷಕರ ಕ್ಷೇತ್ರದಲ್ಲಿ ಹಲವಾರು ಜ್ವಲಂತ ಸಮಸ್ಯೆಗಳ ಪರಿಹರಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡಿದೆ. ಈಗಾಗಲೇ 7 ವೇತನ ಆಯೋಗ ಜಾರಿಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ. ಶಿಕ್ಷಕರ ಕ್ಷೇತ್ರದ ಹಲವು ಸಮಸ್ಯೆಗಳನ್ನ ಪರಿಹಾರ ಮಾಡುವ ನಿಟ್ಟಿನಲ್ಲಿ ನಮ್ಮ ಸಿಎಂ ಸಿದ್ದರಾಮಯ್ಯ ಅವರು ಕೆಲಸ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ದಯಮಾಡಿ 6 ಕ್ಕೆ 6 ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡುವಂತೆ ಅವರು ಮನವಿ ಮಾಡಿದರು.
Poll (Public Option)

Post a comment
Log in to write reviews