
ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಕ್ಷೇತ್ರದ ಮಾಜಿ ಬಿಜೆಪಿ ಸಂಸದ, ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ನಳಿನ್ ಕುಮಾರ್ ಕಟೀಲ್ ವಿರುದ್ಧದ ತನಿಖೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಲಾಗಿದೆ ಎಂದು ಆರೋಪಿಸಿ ಆದರ್ಶ ಅಯ್ಯರ್ ಅವರು ಬೆಂಗಳೂರಿನ ತಿಲಕ್ ನಗರ ಠಾಣೆಗೆ ದೂರು ದಾಖಲಿಸಿದ್ದರು. ಇದರ ಬೆನ್ನಲ್ಲೇ ಕಟೀಲ್ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ತನಿಗೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ನಳೀನ್ ಕುಮಾರ್ ಕಟೀಲ್, ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಸೇರಿದಂತೆ ಇನ್ನಿತರರಿಗೂ ಬಿಗ್ ರಿಲೀಫ್ ಸಿಕ್ಕಂತಾಗಿದೆ.
Poll (Public Option)

Post a comment
Log in to write reviews