
ಬೆಂಗಳೂರಿನಲ್ಲಿ ವಿದ್ಯಾಥಿ೯ನಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಂದಾಪುರದ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಕಾಲೇಜಿನ ಹಾಸ್ಟೇಲ್ ನಲ್ಲಿ ನಡೆದಿದೆ.
ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಕರಡಿಹಳ್ಳಿ ನಿವಾಸಿಯಾಗಿರುವ ಹಷಿ೯ತಾ ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದಳು. ಇದೀಗ ಇದ್ದಕ್ಕಿದ್ದ ಹಾಗೆ ಹಾಸ್ಟೇಲ್ ನಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ. ವಿದ್ಯಾಥಿ೯ನಿ ಸಾವು ಖಂಡಿಸಿ ವಿದ್ಯಾಥಿ೯ಗಳು ಕಾಲೇಜು ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾಸ್ಟೇಲ್ ನಲ್ಲಿ ಸರಿಯಾದ ವ್ಯವಸ್ಥೆ ಇಲ್ಲ, ವಾರ್ಡನ್ ಕೂಡ ಇಲ್ಲ. ಹಾಸ್ಟೇಲ್ ಹಾಗೂ ಕಾಲೇಜಿನಲ್ಲಿರುವ ಒಂದೇ ಒಂದು ಸಿಸಿಟಿವಿ ಕ್ಯಾಮರಾ ಕಾರ್ಯನಿರ್ವಹಿಸುತ್ತಿಲ್ಲ. ವಿದ್ಯಾರ್ಥಿಗಳಿಗೆ ಸಮಸ್ಯೆಯಾದರೂ ಯಾರೂ ಸ್ಪಂದಿಸುತ್ತಿಲ್ಲ. ಕಾಲೇಜು ಆಡಳಿತ ಮಂಡಳಿಯ ಕಿರುಕುಳಕ್ಕೆ ಹರ್ಷಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ
Poll (Public Option)

Post a comment
Log in to write reviews