
ಗದಗ: ಸರಕಾರಿ ಪದವಿಪೂರ್ವ ಕಾಲೇಜು ಕೇಂದ್ರ ಸರ್ಕಾರದ "ಮೇರಿ ಮಾಟಿ ಮೇರಾ ದೇಶ" (ನನ್ನ ಮಣ್ಣು- ನನ್ನ ದೇಶ) ಎನ್ನುವ ಕಾರ್ಯಕ್ರಮವನ್ನು ಕಾಲೇಜಿನ ಎನ್‌ಎಸ್‌ಎಸ್ ಘಟಕ ಯಶಸ್ವಿ ನಡೆಸಿದೆ ಎನ್ನಲಾಗಿದೆ. ಒಂದು ವರ್ಷದ ಪರ್ಯಂತ “ಅಮೃತ ವಾಟಿಕಾ” ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಮಾಡಿಕೊಂಡು ಬಂದಿದೆ. ಎನ್‌ಎಸ್‌ಎಸ್ ಘಟಕದ 100 ವಿದ್ಯಾರ್ಥಿಗಳು, ಕಾಲೇಜು ಮುಂದೆ 50 ಗಿಡಗಳನ್ನು ನೆಟ್ಟು ಮಗುವಿನಂತೆ ಪಾಲನೆ ಪೋಷಣೆ ಮಾಡಿದ್ದಾರೆ. ಕೇಂದ್ರ ಸರ್ಕಾರ ಹಾಗೂ ಎನ್‌ಎಸ್‌ಎಸ್ ಘಟಕದ ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡಲಾಗುತ್ತಿತ್ತು.
ಸ್ವಾತಂತ್ರ್ಯೋವದ ಅಮೃತ ಮಹೋತ್ಸವ ಸಮಯದಲ್ಲಿ ಮಹಾಗನಿ ಹಾಗೂ ತಬೀಬ್ ರೋಜಾ ಜಾತಿಯ ಗಿಡಗಳ ಪೋಷಣೆಯಲ್ಲಿ ತೊಡಗಿದ್ದ 100 ವಿದ್ಯಾರ್ಥಿಗಳ ಪೈಕಿ ಪಿಯುಸಿ ಓದುತ್ತಿರುವ ಸತೀಶ್ ಕನ್ನೇರ್ ಹಾಗೂ ಆದಿತ್ಯ ಕೊರವರ ಎನ್ನುವ ವಿದ್ಯಾರ್ಥಿಗಳು ಬಹಳಷ್ಟು ಅಚ್ಚುಕಟ್ಟಾಗಿ ಗಿಡಗಳನ್ನು ಬೆಳೆಸಿದ್ದನ್ನು ಗಮನಿಸಿ ಅವರಿಗೆ ಪ್ರಧಾನಿ ಕಚೇರಿಯಿಂದ ವಿಶೇಷ ಅತಿಥಿಗಳಾಗಿ ಆಗಸ್ಟ್ 15 ರಂದು ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಕ್ಕೆ, ನಮ್ಮ ಕಾಲೇಜಿಗೆ ಹೆಮ್ಮೆ ಅಂತಾರೆ ಶಿಕ್ಷಕರು.
Poll (Public Option)

Post a comment
Log in to write reviews