
ಬೆಂಗಳೂರು: ಇವಿಎಂ ಲೋಪದಿಂದಾಗಿ ಜೆಡಿಎಸ್ ಮತ್ತು ಬಿಜೆಪಿಗೆ ನಿರೀಕ್ಷೆಗಿಂತ ಹೆಚ್ಚು ಸ್ಥಾನಗಳು ಬಂದಿವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ವಿಧಾನಸೌಧ ಹಾಗೂ ಬಿಬಿಎಂಪಿ ಮುಖ್ಯ ಕಚೇರಿ ಬಳಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಇವಿಎಂ ತೊಲಗಬೇಕು ಬ್ಯಾಲೆಟ್ ಮತದಾನ ಮತ್ತೆ ಬರಬೇಕು. ಫಲಿತಾಂಶದ ಬಗ್ಗೆ ಮತ್ತೊಮ್ಮೆ ಪರಿಶೀಲನೆ ನಡೆಸಬೇಕಾಗಿದೆ ಎಂದಿದ್ದಾರೆ. ಮತ್ತೊಮ್ಮೆ ಫಲಿತಾಂಶವನ್ನು ಪರಿಶೀಲನೆ ನಡೆಸಬಹುದು. ಮಧ್ಯಪ್ರದೇಶದಲ್ಲಿ ಬ್ಯಾಲೆಟ್ ಮತದಾನ ಇದ್ದಾಗ ಮೂರರಲ್ಲಿ ಎರಡು ಭಾಗದಷ್ಟು ಮತಗಳು ಕಾಂಗ್ರೆಸ್ ಪರವಾಗಿ ಬೀಳುತ್ತಿದ್ದವು. ಇವಿಎಂ ಲೋಪದಿಂದಾಗಿ ಕಾಂಗ್ರೆಸ್‌ಗೆ ಈ ಪರಿಸ್ಥಿತಿ ಎದುರಾಗಿದೆ. ಇದರ ಬಗ್ಗೆ ಮತ್ತಷ್ಟು ಆಳವಾಗಿ ಚಿಂತನೆ ನಡೆಸಬೇಕಿದೆ ಎಂದು ಹೇಳಿದರು.
Poll (Public Option)

Post a comment
Log in to write reviews