ಸಾಮಾನ್ಯರ ಹಣ ಸುಲಿದು ಕಾಂಗ್ರೆಸ್ ತನ್ನ ರೊಟ್ಟಿ ಸುಡುತ್ತಿದೆ: ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಕೊಡುವ ನೆಪದಲ್ಲಿ ಬಡವರ ಮೇಲೆ ತೆರಿಗೆ ಹಾಕಿ ಜನತೆಗೆ ದ್ರೋಹ ಮಾಡುತ್ತಿದೆ ಇಂದು ಮಾಜಿ ಸಿಎಂ ಬಸುವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಅವೈಜ್ಞಾನಿಕ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ರಾಜ್ಯದ ಆರ್ಥಿಕತೆ ದಿವಾಳಿ ಮಾಡಿದೆ. ಇದನ್ನು ಸರಿಪಡಿಸಲು ಹಲವು ವರ್ಷ ಬೇಕು. ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆಯಾಗಿದೆ ಎಂದರು.
ಪಕ್ಕದ ರಾಜ್ಯಗಳ ಮಿತ್ರ ಪಕ್ಷಗಳ ಹಿತ ಕಾಯುವ ಮೂಲಕ ರಾಜ್ಯದ ಜನರ ಜೇಬಿಗೆ ಕತ್ತರಿ ಹಾಕುವ ಕೆಲಸವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಈಗಾಗಲೇ ವಿದ್ಯುತ್ ದರ, ಮೋಟಾರು ದರ ಏರಿಕೆ ಮಾಡಿ ಸಾಮಾನ್ಯ ಜನರಿಗೆ ನೇರ ಬರೆ ಎಳೆದಿದ್ದಾರೆ. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಪೆಟ್ರೊಲ್, ಡಿಸೇಲ್ ದರ ಕಡಿಮೆ ಇದೆ ಎಂದು ಬಡವರ ಮೇಲೆ ಭಾರ ಹಾಕುವುದು ಯಾವ ನ್ಯಾಯ ಎಂದು ಪ್ರಶ್ನಿಸಿರುವ ಅವರು, ದರ ಏರಿಕೆ ಮಾಡಿ ಸಮರ್ಥನೆ ಮಾಡಿಕೊಳ್ಳುತ್ತಿರುವ ಮುಖ್ಯಮಂತ್ರಿಯವರ ಹೇಳಿಕೆ ಜನ ವಿರೋಧಿಯಾಗಿದೆ ಎಂದಿದ್ದಾರೆ.
ಉಚಿತ ಗ್ಯಾರಂಟಿ ಕೊಡುತ್ತಿರುವುದಾಗಿ ಹೇಳಿ ಬಡವರ ಮೇಲೆ ತೆರಿಗೆ ಹಾಕಿ ಅವರಿಂದಲೇ ಹಣ ಸುಲಿದು ಕಾಂಗ್ರೆಸ್ ತನ್ನ ರೊಟ್ಟಿ ಸುಟ್ಟುಕೊಂಡು ರಾಜಕೀಯ ಲಾಭ ಮಾಡಿಕೊಳ್ಳುವುದು ಯಾವ ನ್ಯಾಯ ಎಂದು ಪ್ರಶ್ನಿಸಿದ್ದಾರೆ.
Poll (Public Option)

Post a comment
Log in to write reviews