ಟೀಂ ಇಂಡಿಯಾದ ಮಾಜಿ ನಾಯಕ, ಕಾಂಗ್ರೆಸ್ ಲೀಡರ್ ಮೊಹಮ್ಮದ್ ಅಜರುದ್ದೀನ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಅಧಿಕಾರಿಗಳು ಸಮನ್ಸ್ ನೀಡಿರುವ ಹಿನ್ನೆಲೆಯಲ್ಲಿ ಇಂದು ಇ.ಡಿ ಕಚೇರಿಗೆ ವಿಚಾರಣೆಗೆ ಹಾಜರಾಗಲು ಹೋಗಿದ್ದರು.
ಈ ಹಿಂದೆ ಅಜರುದ್ದೀನ್ ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್(HCA) ಅಧ್ಯಕ್ಷರಾಗಿದ್ದರು. ಈ ವೇಳೆ ಉಪ್ಪಲ್ ಕ್ರೀಡಾಂಗಣಕ್ಕಾಗಿ (Uppal Stadium) ಕ್ರಿಕೆಟ್ ಬಾಲ್ಸ್, ಜಿಮ್ ಉಪಕರಣಗಳು, ಅಗ್ನಿಶಾಮಕ ಕಿಟ್‌ಗಳು ಮತ್ತು ಇತರೆ ಸಲಕರಣೆಗಳ ಖರೀದಿ ಮಾಡಲಾಗಿತ್ತು. 2020-23ರ ಅವಧಿಯಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು.
ಈ ಸಂಬಂಧ ಉಪ್ಪಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದನ್ನು ಆಧರಿಸಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸ್ತಿದ್ದಾರೆ. ಇನ್ನು ತಮ್ಮ ಮೇಲಿನ ಆರೋಪ ನಿರಾಧಾರ. ತಾವು ಯಾವುದೇ ತಪ್ಪು ಮಾಡಿಲ್ಲ ಎಂದು ಅಜರುದ್ದೀನ್ ಹೇಳಿದ್ದಾರೆ.
Post a comment
Log in to write reviews