
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಸಬ್ ಇನ್ಸ್ಪೆಕ್ಟರ್ ಹುದ್ದೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 4 ಸಾವಿರ ಹುದ್ದೆಗಳ ನೇಮಕಾತಿಗೆ ಪರೀಕ್ಷಾ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.
ಪೋಲಿಸ್ ಇಲಾಖೆಯ 402 ಪಿಎಸ್‌ಐ ಹುದ್ದೆಗಳಿಗೆ ಸೆಪ್ಟೆಂಬರ್ 22ರಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಕೆಇಎ ಪ್ರಕಟಣೆ ಹೊರಡಿಸಿದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಸಹಾಯಕ ಲೆಕ್ಕಿಗ ಸೇರಿದಂತೆ 36 ಹುದ್ದೆಗಳಿಗೆ ಜುಲೈ 12, 13 ಮತ್ತು 14ರಂದು ಪರೀಕ್ಷೆ ನಡೆಯಲಿದೆ. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಇಂಜಿನಿಯರ್ ಮತ್ತು ಗ್ರೂಪ್–ಸಿ 64 ಹುದ್ದೆಗಳಿಗೆ ಆಗಷ್ಟ್ 11 ರಂದು ಪರೀಕ್ಷೆ ನಡೆಯಲಿದೆ.
ಬಿಎಂಟಿಸಿಯಲ್ಲಿ 2,500 ನಿರ್ವಾಹಕ ಹುದ್ದೆಗಳಿಗೆ ಸೆಪ್ಟೆಂಬರ್ 1ರಂದು ಪರೀಕ್ಷೆ ನಡೆಯಲಿದೆ. ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ 1,000 ಹುದ್ದೆಗಳಿಗೆ ಅಕ್ಟೋಬರ್ 27 ರಂದು ಪರೀಕ್ಷೆ ನಡೆಯಲಿದೆ ಎಂದು ಕೆಇಎ ತಿಳಿಸಿದೆ.
Poll (Public Option)

Post a comment
Log in to write reviews