
ಕಿಂಗ್‌ಸ್ಟನ್: ದಕ್ಷಿಣ ಆಫ್ರಿಕಾ ಹಾಗೂ ನೇಪಾಳ ನಡುವಿನ ಟಿ20 ವಿಶ್ವಕಪ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 1 ರನ್‌ಗಳ ರೋಚಕ ಜಯ ದಾಖಲಿಸಿದೆ.
ವೆಸ್ಟ್‌ಇಂಡೀಸ್‌ನ ಕಿಂಗ್‌ಸ್ಟನ್‌ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ನೇಪಾಳ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಬ್ಯಾಟಿಂಗ್ ಆರಂಭಿಸಿದ ದಕ್ಷಿಣ ಆಫ್ರಿಕಾ, ರೀಜಾ ಹೆಂಡ್ರಿಕ್ಸ್ ಅವರ ಬ್ಯಾಟಿಂಗ್ ನೆರವಿನಿಂದ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು ಕೇವಲ 155 ರನ್ ಗಳಿಸಿತು.
ಗುರಿ ಬೆನ್ನಟ್ಟಿದ ನೇಪಾಳ ಗೆಲುವಿಗಾಗಿ ಸಾಕಷ್ಟು ಹೋರಾಟ ಮಾಡಿತು. ಆದರೆ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು ಕೇವಲ 114 ರನ್ ಗಳಿಸಲಷ್ಟೇ ಶಕ್ತವಾಗಿ ದಕ್ಷಿಣ ಆಫ್ರಿಕಾಗೆ ಒಂದು ರನ್‌ನಿಂದ ಶರಣಾಯಿತು.
ಈ ಟೂರ್ನಿಯಲ್ಲಿ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ದಕ್ಷಿಣ ಆಫ್ರಿಕಾ ತಂಡ ಈಗಾಗಲೇ ಸೂಪರ್ 8ರ ಹಂತಕ್ಕೆ ಅರ್ಹತೆ ಪಡೆದಿದೆ. ನೇಪಾಳ ಮೂರು ಪಂದ್ಯಗಳ ಪೈಕಿ ಎರಡು ಪಂದ್ಯಗಳಲ್ಲಿ ಸೋತು ಟೂರ್ನಿಯಿಂದ ಹೊರಬಿದ್ದಿದೆ.
Poll (Public Option)

Post a comment
Log in to write reviews