
ಬೆಳಗಾವಿ: ಮದ್ದು ತಯಾರಿಸುವ ವೇಳೆ ಆಕಸ್ಮಿಕವಾಗಿ ಸ್ಫೋಟಗೊಂಡು ವ್ಯಕ್ತಿಯೊಬ್ಬರು ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಗೋಕಾಕ ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ ನಡೆದಿದೆ.
ಮಲ್ಲಪ್ಪ ಸತ್ಯಪ್ಪ ಕಂಕಣವಾಡಿ (38) ಮೃತ ದುರ್ದೈವಿ ಎಂದು ತಳಿದುಬಂದಿದೆ. ಮಲ್ಲಪ್ಪ ಪಂಚಮಿ ಹಬ್ಬದಂದು ಮದ್ದು ಹಾರಿಸಲೆಂದು ಮದ್ದು ತಯಾರು ಮಾಡುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ಸ್ಫೋಟಗೊಂಡು ದುರ್ಘಟನೆ ಸಂಭವಿಸಿದೆ. ಏಕಾಏಕಿ ಬೆಂಕಿ ಎಲ್ಲೆಡೆ ಆವರಿಸಿದ್ದರಿಂದ ಮಲ್ಲಪ್ಪ ಸುಟ್ಟು ಭಸ್ಮವಾಗಿದ್ದಾರೆ. ಸ್ಥಳಕ್ಕೆ ಘಟಪ್ರಭಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.
Poll (Public Option)

Post a comment
Log in to write reviews