
ನವದೆಹಲಿ: ಎರಡನೇ ಬಾರಿಗೆ ವಿದೇಶಾಂಗ ಸಚಿವರಾದ ಎಸ್. ಜೈಶಂಕರ್ ಇಂದು ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದ್ದಾರೆ. ಪ್ರಧಾನಿ ಮೋದಿ ಸಂಪುಟದಲ್ಲಿ ಎರಡನೇ ಅವಧಿಗೆ ವಿದೇಶಾಂಗ ಖಾತೆ ಅಲಂಕರಿಸಿದ ನಂತರದ ಮೊದಲ ದ್ವಿಪಕ್ಷೀಯ ಭೇಟಿಯಾಗಿ ನೆರೆಯ ರಾಷ್ಟ್ರ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದಾರೆ.
‘ನೆರೆಯವರೇ ಮೊದಲು’ ಎಂಬ ಭಾರತದ ನೀತಿಯ ಭಾಗವಾಗಿದೆ ಈ ಪ್ರವಾಸ ಉಭಯರಾಷ್ಟ್ರಗಳ ದ್ವಿಪಕ್ಷೀಯ ಬಾಂಧವ್ಯದ ಪ್ರತೀಕವಾಗಿದೆ ಎಂದು ಅವರು ತಿಳಿಸಿದ್ದಾರೆ. ಭೇಟಿಯ ವೇಳೆ ಜೈಶಂಕರ್ ಹಲವು ವಿಚಾರಗಳ ಕುರಿತು ಶ್ರೀಲಂಕಾದ ಉನ್ನತ ನಾಯಕರೊಂದಿಗೆ ಚರ್ಚಿಸಲಿದ್ದಾರೆ. ಈ ಭೇಟಿಯು ಉಭಯ ರಾಷ್ಟ್ರಗಳ ಸಂಪರ್ಕ ಯೋಜನೆ ಮತ್ತು ಸಹಕಾರ ಯೋಜನೆಗಳಿಗೆ ವೇಗ ನೀಡಲಿದೆ ಎಂದು ಮಾಹಿತಿ ನೀಡಿದ್ದಾರೆ.
Poll (Public Option)

Post a comment
Log in to write reviews