
ಬೆಂಗಳೂರು: ಇತ್ತೀಚಿಗೆ ಬೆಂಗಳೂರಿನ ಖಾಸಗಿ ಶಾಲೆಯೊಂದಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದವು.ಈ ಘಟನೆ ಮಾಸುವ ಮುನ್ನವೇ ಇದೀಗ ಸಿಲಿಕಾನ್ ಸಿಟಿಯ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೋಟೆಲ್ಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಕೂಡಲೆ ಹೋಟೆಲ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಇನ್ನು ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು, ಬಾಂಬ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹುಸಿ ಬಾಂಬ್ ಬೆದರಿಕೆ ಎಂದು ದೃಢವಾಗಿದೆ. ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ತಾಜ್ ವೆಸ್ಟ್ ಎಂಡ್ ಹೊಟೇಲನಲ್ಲಿ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೋಟೇಲ್ನಲ್ಲಿ ರಾಜಕಾರಣಿಗಳು, ಗಣ್ಯ, ವ್ಯಕ್ತಿಗಳು ಆಗಾಗ ವಾಸ್ತವ್ಯ ಹೂಡುತ್ತಾರೆ.
Poll (Public Option)

Post a comment
Log in to write reviews