
ಮಾಜಿ ಪತ್ನಿ ನೀಡಿದ ದೂರಿನ ಮೇರೆಗೆ ಮಲಯಾಳಂ ನಟ ಬಾಲ ಅವರನ್ನು ಇಂದು ಬೆಳಗ್ಗೆ ಕಡವಂತರಾ ಪೊಲೀಸರು ಬಂಧಿಸಿದ್ದಾರೆ. ನಟನ ಮ್ಯಾನೇಜರ್ ರಾಜೇಶ್ ಮತ್ತು ಮತ್ತೊಬ್ಬ ಆರೋಪಿ ಅನಂತಕೃಷ್ಣನ್ ಅವರನ್ನೂ ಪೊಲೀಸರು ಬಂಧಿಸಿದ್ದು, ಸಾಮಾಜಿಕ ಮಾಧ್ಯಮಗಳ ಮೂಲಕ ನಿಂದನೆ ಮತ್ತು ಕಿರುಕುಳ ನೀಡಿದ ಆರೋಪ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.
ಕೆಲವು ತಿಂಗಳುಗಳಿಂದ ಬಾಲಾ ಮತ್ತು ಅವರ ಮಾಜಿ ಪತ್ನಿ ಅಮೃತಾ ಸುರೇಶ್ ನಡುವಿನ ಭಿನ್ನಾಭಿಪ್ರಾಯ ಉಂಟಾಗಿದ್ದು, ಮದುವೆಯ ಸಂದರ್ಭದಲ್ಲಿ ಅಮೃತಾ ತನ್ನ ಎದುರಿಸಿದ ಕೌಟುಂಬಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ್ದರು. ಏತನ್ಮಧ್ಯೆ, ಬಾಲಾ ಮತ್ತು ಅಮೃತಾರ ಮಾಜಿ ಡ್ರೈವರ್ ಗಂಭೀರ ಆರೋಪ ಮಾಡಿದ್ದಾರೆ. ನಟನ ಬಳಿ ನಾನು ಕೆಲಸ ಮಾಡುವಾಗ ತನ್ನ ಹೆಂಡತಿಯೊಂದಿಗೆ ಅನುಚಿತವಾಗಿ ವರ್ತಿಸುವುದನ್ನು ನೋಡಿದ್ದೇನೆ ಎಂದಿದ್ದಾರೆ. ಬಾಲಾ ಅವರನ್ನು ಜಾಮೀನು ರಹಿತ ಸೆಕ್ಷನ್ ಅಡಿಯಲ್ಲಿ ಬಂಧಿಸಲಾಗಿದೆ ಎನ್ನಲಾಗಿದೆ.
Poll (Public Option)

Post a comment
Log in to write reviews