
ತಮಿಳು ಸಿನಿಮಾಗಳಿಗೆ ಸಂಗೀತ ಸಂಯೋಜನೆ ಮಾಡಿ ಗಮನ ಸೆಳೆದಿರೋ ಜಿವಿ ಪ್ರಕಾಶ್ ಕುಮಾರ್ ಹಾಗೂ ಅವರ ಪತ್ನಿ ಸೈಂಧವಿ ಅವರು ದೂರ ಆಗುತ್ತಿರುವ ಬಗ್ಗೆ ಘೋಷಣೆ ಮಾಡಿದ್ದಾರೆ.
ಈ ಮೂಲಕ 11 ವರ್ಷಗಳ ದಾಂಪತ್ಯ ಜೀವನ ಅಂತ್ಯವಾಗಿದೆ. ವಿಚ್ಚೇದನ ಪಡೆಯುತ್ತಿರುವ ವಿಚಾರವನ್ನು ಈ ದಂಪತಿ ಸೋಶಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ಆಗುತ್ತಿದೆ.
‘ಸಾಕಷ್ಟು ಆಲೋಚಿಸಿ ನಾನು ಹಾಗೂ ಸೈಂಧವಿ ಬೇರೆ ಆಗುತ್ತಿದ್ದೇವೆ. 11 ವರ್ಷಗಳ ದಾಂಪತ್ಯಕ್ಕೆ ಕೊನೆ ಹಾಡುತ್ತಿದ್ದೇವೆ. ನಮ್ಮ ಮಾನಸಿಕ ಆರೋಗ್ಯಕ್ಕಾಗಿ ಈ ನಿರ್ಧಾರ’ ಎಂದು ಪ್ರಕಾಶ್ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ವೈಯಕ್ತಿಕ ಪರಿವರ್ತನೆಯ ಸಮಯದಲ್ಲಿ ನಮ್ಮ ಖಾಸಗಿತನಕ್ಕೆ ಬೆಲೆ ನೀಡಬೇಕು ಎಂದು ಮಾಧ್ಯಮಗಳು, ಸ್ನೇಹಿತರು ಮತ್ತು ಅಭಿಮಾನಿಗಳನ್ನು ನಾವು ದಯೆಯಿಂದ ಕೇಳುತ್ತೇವೆ. ನಾವು ಬೇರೆ ಬೇರೆ ಆಗಿ ಬೆಳೆಯುತ್ತಿದ್ದೇವೆ. ಇದು ಅತ್ಯುತ್ತಮ ನಿರ್ಧಾರ ಎಂದು ನಾವು ಭಾವಿಸುತ್ತೇವೆ. ಈ ಕಷ್ಟದ ಸಮಯದಲ್ಲಿ ನಿಮ್ಮ ತಿಳುವಳಿಕೆ ಮತ್ತು ಬೆಂಬಲವು ಮುಖ್ಯ’ ಎಂದಿದ್ದಾರೆ ಪ್ರಕಾಶ್.
Tags:
Poll (Public Option)

Post a comment
Log in to write reviews