
ಬೆಂಗಳೂರು: ಕನ್ನಡ ಕಿರುತೆರೆಯ ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ʻಕರಿಮಣಿʼ, ʻಶಾಂತಂ ಪಾಪಂʼ ಸೇರಿದಂತೆ ಹಲವು ಧಾರವಾಹಿಗಳಿಗೆ ವಿನೋದ್ ನಿರ್ದೇಶನ ಮಾಡಿದ್ದರು. ಸದ್ಯ ನಿನಾಸಮ್ ಸತೀಶ್ ನಟನೆಯ ʻಅಶೋಕ ಬ್ಲೇಡ್ʼ ಚಿತ್ರ ನಿರ್ದೇಶನಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಮುಂದಿನ ವಾರದಿಂದ ಚಿತ್ರೀಕರಣ ಶುರು ಮಾಡಬೇಕಿತ್ತು. ಆದರೆ ಕಳೆದ ಎರಡು ವರ್ಷಗಳಿಂದಲೂ ಚಿತ್ರದ ಶೂಟಿಂಗ್ ಕುಂಟುತ್ತಲೇ ಸಾಗಿತ್ತು ನಿರ್ಮಾಪಕರಾಗಿದ್ದರಿಂದ ಸಾಲದ ಸುಳಿಗೆ ಸಿಲುಕಿದ್ದ ವಿನೋದ್ ಸೂಸೈಡ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ನಿನ್ನೆ ಸಂಜೆಯಷ್ಟೇ ನಿನಾಸಂ ಸತೀಶ್ ಮತ್ತು ಚಿತ್ರತಂಡ ವಿನೋದ್ ದೊಂಡಾಲೆ ಜೊತೆ ಮಾತನಾಡಿ ಬಂದಿದ್ದರು ಎನ್ನಲಾಗಿದೆ. ವಿನೋದ್ ವಿ ದೋಂಡಾಲೆ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಿರ್ದೇಶಕ. ಪಿ.ಶೇಷಾದ್ರಿ, ಟಿ.ಎನ್, ಸೀತಾರಾಂ ಅವರ ಜೊತೆ ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ಸಂಚಿಕೆ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.
ನಿರ್ದೇಶಕರು ನಾಗರಬಾವಿಯಲ್ಲಿನ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸದ್ಯ ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.
Poll (Public Option)

Post a comment
Log in to write reviews