
ಸಾಲಬಾದೆಗೆ ಹೆದರಿ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊರಟಗೆರೆ ತಾಲೂಕಿನ ಕಬುಗೆರೆ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ. 38 ವಷ೯ದ ರಾಜಣ್ಣ ನೇಣಿಗೆ ಶರಣಾಗಿರುವ ರೈತ.
ಜಮೀನಿನಲ್ಲಿ ಬೋರ್ವೆಲ್ ಕೊರೆಸಲು ರೈತ ಲಕ್ಷಾಂತರ ರೂ ಸಾಲ ಮಾಡಿದ್ದರು. ಆದರೆ ಜಮೀನಿನಲ್ಲಿ 5ಕ್ಕೂ ಹೆಚ್ಚು ಬೋರ್ವೆಲ್ ಕೊರೆಸಿದರು ನೀರು ಸಿಗಲಿಲ್ಲ. ಇದರಿಂದಾಗಿ ರಾಜಣ್ಣ ಹಲವು ಫೈನಾನ್ಸ್ ಗಳಲ್ಲಿ 12 ಲಕ್ಷಕ್ಕೂ ಅಧಿಕ ಸಾಲ ಪಡೆದಿದ್ದರು. ಪಡೆದ ಸಾಲ ವಾಪಸ್ ತಿರುಗಿಸಲು ಸಾಧ್ಯವಾಗದ ಕಾರಣ ತಡರಾತ್ರಿ ತನ್ನ ಜಮೀನಿನಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Poll (Public Option)

Post a comment
Log in to write reviews