2024-12-24 05:51:39

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ನಾಲ್ವರು ಮಕ್ಕಳೊಂದಿಗೆ ತಂದೆ ಆತ್ಮಹತ್ಯೆ

ನವದೆಹಲಿ: ರಾಷ್ಟ್ರ ರಾಜಧಾನಿಯಾದ ನವದೆಹಲಿಯಲ್ಲಿ ತಂದೆಯೊಬ್ಬರು ತನ್ನ ನಾಲ್ವರು ವಿಕಲಚೇತನ ಹೆಣ್ಣು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿಯ ರಂಗಪುರಿ ಪ್ರದೇಶದಲ್ಲಿ ನಡೆದಿದೆ. ಈಗಾಗಲೇ ಈ ಮಕ್ಕಳ ತಾಯಿ ಕ್ಯಾನ್ಸರ್‌ ಎಂಬ ಕಾಯಿಲೆಯಿಂದ ಸಾವನ್ನಪ್ಪಿದ್ದರು. ಪೊಲೀಸರು ಮನೆಯ ಬೀಗ ಒಡೆದು ಶುಕ್ರವಾರ ತಡರಾತ್ರಿ ಎಲ್ಲಾ ಶವಗಳನ್ನು ಹೊರತೆಗೆದಿದ್ದಾರೆ. ಹೆಣ್ಣು ಮಕ್ಕಳನ್ನು ಪೋಷಿಸಲಾಗದೆ ಇರುವ ಕಾರಣ ತಂದೆ ಈ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮಾಹಿತಿಯ ಪ್ರಕಾರ ಇವರು ಮೂಲತಃ ಬಿಹಾರದ ಛಪ್ರಾ ಜಿಲ್ಲೆಯ ನಿವಾಸಿ ಇವರಿಗೆ ಸುಮಾರು 50 ವರ್ಷ ವಯಸ್ಸಾಗಿತ್ತು. ಅವರಿಗೆ ನಾಲ್ವರು ಹೆಣ್ಣು ಮಕ್ಕಳಿದ್ದರು. ಅವರು ರಂಗಪುರಿ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿದ್ದರು. ಅವರು ಕಾರ್ಪೆಂಟರ್ ಆಗಿ ಪ್ರದೇಶದ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಶುಕ್ರವಾರ ಸಂಜೆ ಅವರ ಮಹಡಿಯಿಂದ ದುರ್ವಾಸನೆ ಬರಲು ಪ್ರಾರಂಭಿಸಿದ ನಂತರ, ನೆರೆಹೊರೆಯವರು ಘಟನೆಯ ಬಗ್ಗೆ ಮನೆಯ ಮಾಲೀಕರಿಗೆ ತಿಳಿಸಿದ್ದರು. ಬಳಿಕ ಪೊಲೀಸರಿಗೆ ತಿಳಿಸಿದ್ದರು. ಪೊಲೀಸರು ಮಹಡಿಯ ಬಾಗಿಲು ಒಡೆದು ನೋಡಿದಾಗ ಒಳಗೆ ಐದು ಶವಗಳು ಪತ್ತೆಯಾಗಿದ್ದು, ಎರಡ್ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಪೊಲೀಸರು ಈ ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ವಿವರವನ್ನು ಕಲೆ ಹಾಕುತ್ತಿದ್ದಾರೆ.

Post a comment

No Reviews