
ಜಮೀನು ಮಾರಿದ ಹಣದ ವಿಚಾರಕ್ಕೆ ತಂದೆಯೇ ಮಗನನ್ನು ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ರಾಮನಗರ ಜಿಲ್ಲೆ ಲಕ್ಕೋಜನಹಳ್ಳಿಯಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿ 31 ವಷ೯ದ ಭಾಸ್ಕರ್. ಹತ್ಯೆಗ್ಯೆದ ಆರೋಪಿ 60 ವಷ೯ದ ಕೃಷ್ಣಪ್ಪ ಎಂದು ತಿಳಿದು ಬಂದಿದೆ.
ಅಪ್ಪ ಮಗ ಜಮೀನು ಮಾರಿದ ಹಣದ ವಿಚಾರಕ್ಕೆ ಆಗಾಗ ಗಲಾಟೆ ಮಾಡಿಕೊಳ್ಳುತ್ತಿದ್ದರು. ಅದೇ ರೀತಿ ಮೇ 17 ರ ರಾತ್ರಿ ಕೂಡ ಗಲಾಟೆ ಮಾಡಿಕೊಂಡಿದ್ದಾರೆ. ಇದೇ ಕಾರಣಕ್ಕೆ ಮಗ ಮಲಗಿದ್ದಾಗ ತಂದೆ ಮಚ್ಚಿನಿಂದ ತಲೆಯ ಮೇಲೆ ಹಲ್ಲೆ ಮಾಡಿದ್ದಾರೆ ,ಇದರಿಂದಾಗಿ ಮಗ ಸ್ಥಳದಲ್ಲೇ ಮರಣ ಹೊಂದಿದ್ದಾರೆ. ಸ್ಥಳಕ್ಕೆ ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
Poll (Public Option)

Post a comment
Log in to write reviews