
ಚಾಮನರಾಜನಗರ: ಗುಂಡ್ಲುಪೇಟೆಯಲ್ಲಿ ಅನಾರೋಗ್ಯದಿಂದ ನಿತ್ರಾಣಗೊಂಡಿದ್ದ ಹೆಣ್ಣಾನೆ ಒಂದು ಸಾವನಪ್ಪಿದೆ. ಬಂಡಿಪುರದ ಹೆಡಿಯಾಲ ಉಪ ವಿಭಾಗದ ಮೊಳೆಯೂರು ವಲಯದಲ್ಲಿ ಈ ಘಟನೆ ನಡೆದಿದೆ. ಹೆಣ್ಣಾನೆಗೆ ಸುಮಾರು 25 ರಿಂದ 30 ವರ್ಷದ ವಿರಬಹುದೆಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ. ಹೆಣ್ಣಾನೆ ಮೊಳೆಯೂರು ವಲಯದಲ್ಲಿ ನಿತ್ರಾಣಗೊಂಡು ಬಿದ್ದಿದ್ದ ವಿಚಾರವನ್ನು ಅಲ್ಲಿನ ಸಿಬ್ಬಂದಿಗಳು ಮೇಲಧಿಕಾರಿಗಳ ಗಮನಕ್ಕೆ ತಂದಿದ್ದರು, ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದರು. ನಂತರ ಸ್ಥಳಕ್ಕೆ ಆಗಮಿಸಿದ ಪಶು ವೈದ್ಯಾಧಿಕಾರಿ ವಾಸೀಂ ಮಿರ್ಜಾ ಎಲ್ಲಾ ಸಿಬ್ಬಂದಿ ಅಧಿಕಾರಿಗಳ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದರು. ತದ ನಂತರ ಎಲ್ಲರ ಸಮ್ಮುಕದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಿದರು.
Poll (Public Option)

Post a comment
Log in to write reviews