ಟಾಪ್ 10 ನ್ಯೂಸ್
ಪೆಟ್ರೋಲ್, ಡೀಸೆಲ್ ದರ ಏರಿಕೆ ಹಿಂಪಡೆಯದಿದ್ದರೆ ಉಗ್ರ ಹೋರಾಟ – ಗಂಡಸಿ ಸದಾನಂದ ಸ್ವಾಮಿ
ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ದರಗಳ ಏರಿಕೆಯಾಗಿದ್ದು, ದರ ಕಡಿಮೆಗೊಳಿಸದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಇಂಡಿಯನ್ ವೆಹಿಕಲ್ ಡ್ರೈವರ್ ಅಸೋಸಿಯೇಷನ್ ಎಚ್ಚರಿಕೆ ನೀಡಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಭಾರತೀಯ ವಾಹನ ಚಾಲಕ ಸಂಘದ ಅಧ್ಯಕ್ಷ ಗಂಡಸಿ ಸದಾನಂದ ಸ್ವಾಮಿ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಮನವಿ ಸಲ್ಲಿಸಲಾಗಿದ್ದು ತಕ್ಷಣವೇ ದರ ಇಳಿಕೆ ಮಾಡಬೇಕು ಇಲ್ಲವಾದಲ್ಲಿ ಉಗ್ರ ಹೊರಾಟ ಮಾಡಲಾಗುವುದು ಎಂದರು.
ರಾಜ್ಯದಲ್ಲಿ 83 ಲಕ್ಷಕ್ಕೂ ಅಧಿಕ ಹಳದಿ ಬೋರ್ಡ್ ವಾಹನಗಳು ಸಂಚರಿಸುತಿದ್ದು ತೈಲ ದರ ಏರಿಕೆ ನಮ್ಮೆಲ್ಲರ ಮೇಲೆ ಬರೆ ಎಳೆದಂತಾಗಿದೆ. ಗ್ಯಾರೆಂಟಿ ಯೋಜನೆಗಳಿಗೆ ಹಣ ಹೊಂದಿಸಲು ರಾಜ್ಯ ಸರ್ಕಾರ ಬೆಲೆ ಏರಿಕೆ ಮಾಡಿದ್ದು ಜನ ಸಾಮಾನ್ಯರ ಬದುಕಿಗೆ ಕೊಳ್ಳಿ ಇಟ್ಟಿದೆ. ಯಾವುದೇ ಸುಳಿವು ನೀಡದೇ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆ ಹೆಚ್ಚಿಸಿರುವುದು ಅತ್ಯಂತ ಖಂಡನೀಯ ತಿಳಿಸಿದರು.
Post a comment
Log in to write reviews