
ಬೆಂಗಳೂರು: ಪೆಟ್ರೋಲ್, ಡೀಸೆಲ್ ದರ ಏರಿಕೆ ನಡುವೆ ಸರ್ಕಾರ ಮದ್ಯ ಪ್ರಿಯರಿಗೆ ಗುಡ್ ನ್ಯೂಸ್ ಕೊಟ್ಟಿದೆ. ಜು.1ರಿಂದ ರಾಜ್ಯದಲ್ಲಿ ದುಬಾರಿ ಬೆಲೆಯ ಬ್ರ್ಯಾಂಡ್ ಮದ್ಯದ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಇಳಿಸಲು ಸರ್ಕಾರ ಮುಂದಾಗಿದೆ.
ಹೊರ ರಾಜ್ಯಗಳಲ್ಲಿನ ಮದ್ಯದ ದರಪಟ್ಟಿ ಆಧರಿಸಿ ಹೊಸದಾಗಿ ಬೆಲೆ ನಿಗದಿಪಡಿಸಲಾಗಿದೆ. ಅಬಕಾರಿ ಆದಾಯ ಸಂಗ್ರಹ ಹೆಚ್ಚಳಕ್ಕಾಗಿ ರಾಜ್ಯ ಸರ್ಕಾರ ಸತತವಾಗಿ ಮದ್ಯದ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆ ಹೆಚ್ಚಿಸುತ್ತಲೇ ಬಂದಿತ್ತು. ಆದರೆ ಇದೇ ಮೊದಲ ಬಾರಿಗೆ ಎಇಡಿ ಕಡಿಮೆ ಮಾಡುವ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ. ಅಬಕಾರಿ ತೆರಿಗೆ ಇಳಿಕೆ ಸಂಬಂಧ ಕರಡು ಅಧಿಸೂಚನೆ ಪ್ರಕಟಿಸಿದೆ. ಅಲ್ಲದೆ, ಈ ಅಧಿಸೂಚನೆ ಸಂಬಂಧ ಆಕ್ಷೇಪಣೆ ಸಲ್ಲಿಕೆಗೆ ಏಳು ದಿನಗಳ ಕಾಲಾವಕಾಶ ನೀಡಿದೆ.
Poll (Public Option)

Post a comment
Log in to write reviews