
ಬೆಂಗಳೂರು: ನಗರದಲ್ಲಿ ಅನಧಿಕೃತ ಜಾಹೀರಾತು ಹಾಕಿದವರ ವಿರುದ್ಧ ಬಿಬಿಎಂಪಿ ಎಫ್‌ಐಆರ್ ದಾಖಲಿಸುತ್ತಿದೆ.
ಯಾವುದೇ ಅನಧಿಕೃತ ಜಾಹೀರಾತುಗಳು ಅಳವಡಿಸಿದರೆ ಸೂಕ್ತ ಕ್ರಮ ವಹಿಸಲು ಈ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಒಟ್ಟು 1259 ಫ್ಲೆಕ್ಸ್, ಬ್ಯಾನರ್, ಎಲ್ಇಡಿ ಹಾಗೂ ಹೋರ್ಡಿಂಗ್ಸ್ಗಳನ್ನು ತೆರವುಗೊಳಿಸಿ ಠಾಣೆಯಲ್ಲಿ 27 ಪ್ರಕರಣ ದಾಖಲಿಸಿದ್ದು 12 ಎಫ್ಐಆರ್ ಮಾಡಲಾಗಿದೆ.
ಯಾವುದೆ ಅನಧಿಕೃತ ಜಾಹೀರಾತುಗಳು ಕಂಡು ಬಂದಲ್ಲಿ ಸಹಾಯವಾಣಿಗೆ ಸಂಖ್ಯೆ 1533ಗೆ ಕರೆ ಮಾಡಬಹುದು. ಜಾಹೀರಾತು ವಿಭಾಗದ ವ್ಯಾಟ್ಸಪ್ ಸಂಖ್ಯೆ 9480683939 ಗೆ ಛಾಯಾಚಿತ್ರ ಅಥವಾ ವೀಡಿಯೋ ಮಾಡಿ ವಿಳಾಸ ಸಹಿತ ಕಳುಹಿಸಬಹುದು.
Poll (Public Option)

Post a comment
Log in to write reviews