
ಮೈಸೂರು ; ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಯಾದಗಿರಿಯ ಶಹಾಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಗಣೇಶ ವಿಸರ್ಜನೆ ಶೋಭಾಯಾತ್ರೆ ಮೆರವಣಿಗೆ ವೇಳೆ ಮಾಜಿ ಸಂಸದ ಸಿಂಹ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.
ಇದೇ ಸೆ. 21ರಂದು ಹಿಂದೂ ಮಹಾ ಗಣಪತಿ ವಿಸರ್ಜನಾ ಶೋಭಾ ಯಾತ್ರೆಯಲ್ಲಿ ಪ್ರತಾಪ್ ಸಿಂಹ ಭಾಗಿಯಾಗಿ ಭಾಷಣ ಮಾಡಿದ್ದರು. ಆ ವೇಳೆ ಮುಸ್ಲಿಂ ಸಮುದಾಯದವರನ್ನು ಉದ್ದೇಶಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಆರೋಪ ಕೇಳಿ ಬಂದಿದೆ. ಇನ್ನೂ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ್ದ ಮಾಜಿ ಸಂಸದ ಪ್ರತಾಪ್ ಗಣೇಶ ವಿಸರ್ಜನೆ ವೇಳೆ ಎಲ್ಲಾ ಕಡೆ ಕಲ್ಲುತೂರಾಟ ಮಾಡುವ ಪ್ರವೃತ್ತಿ ಕಾಣಿಸುತ್ತಾ ಇದೆ. ಕಲ್ಲು ಹೊಡೆಯುವ ಪ್ರವೃತ್ತಿ ಮುಸ್ಲಿಮರಿಗೆ ಮಾತ್ರ ಯಾಕೆ ಬರುತ್ತದೆ? ಹಿಂದುಗಳು ಎಲ್ಲರೂ ಕೈಯಲ್ಲಿ ಒಂದೊಂದು ಕಲ್ಲು ಹಿಡಿದುಕೊಂಡರೆ ನಿಮ್ಮ ಕಥೆ ಏನು ಆಗುತ್ತದೆ ಗೊತ್ತೇ ಎಂದು ಪ್ರಶ್ನಿಸಿದ್ದರು. ಇನ್ನೂ ಪರಮಾಣು ಬಾಂಬ್ ಸಿದ್ಧಪಡಿಸುವುದನ್ನು ಕಂಡುಹಿಡಿದ ಹಿಂದುಗಳಿಗೆ ಪೆಟ್ರೋಲ್ ಬಾಂಬ್ ತಯಾರಿಸಲು ಬರುವುದಿಲ್ಲವೇ? ಟಾಂಗಾಗಳು, ಗುಜರಿಗಳು ಮಾಡುವ ಕೆಲಸವನ್ನು ಕ್ಷಣಮಾತ್ರದಲ್ಲಿ ಮಾಡಲು ಹಿಂದುಗಳಿಗೆ ಬರುತ್ತದೆ ಎಂದು ಪ್ರಚೋದನಾಕಾರಿ ಹೇಳಿಕೆ ನೀಡಿದರು. ಸದ್ಯ ಈ ಕುರಿತು ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.
Poll (Public Option)

Post a comment
Log in to write reviews