ಕಾಪಿರೈಟ್ ಉಲ್ಲಂಘನೆ : ಸ್ಯಾಂಡಲ್ವುಡ್ ನಟ ರಕ್ಷಿತ್ ಶೆಟ್ಟಿ ವಿರುದ್ದ FIR ದಾಖಲು

ಬೆಂಗಳೂರು : ಕಾಪಿರೈಟ್ ಉಲ್ಲಂಘನೆ ಆರೋಪದಡಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ರಕ್ಷಿತ್ ಶೆಟ್ಟಿ ಮಾಲೀಕತ್ವದ ಪರಂವಃ ಸ್ಟುಡಿಯೋಸ್ ನಿರ್ಮಿಸಿದ್ದ ಬ್ಯಾಚುಲರ್ ಪಾರ್ಟಿ ಸಿನಿಮಾ ಜನವರಿ 26ರಂದು ರಿಲೀಸ್ ಆಗಿತ್ತು. ಈ ಸಿನಿಮಾದಲ್ಲಿ ‘ನ್ಯಾಯ ಎಲ್ಲಿದೆʼ ಟೈಟಲ್ ಸಾಂಗ್ ಹಾಗೂ “:ಒಮ್ಮೆ ನಿನ್ನನ್ನೂ ಕಣ್ತುಂಬ ನೋಡುವಾಸೆ” ಹಾಡುಗಳನ್ನು ರಕ್ಷಿತ್ ಶೆಟ್ಟಿ ಕದ್ದಿದ್ದಾರೆ. ಎರಡು ಚಿತ್ರದ ಹಾಡುಗಳನ್ನು ಅನುಮತಿ ಇಲ್ಲದೆ ಬಳಕೆ ಮಾಡಿದ ಆರೋಪದಡಿಯಲ್ಲಿ ರಕ್ಷಿತ್ ಶೆಟ್ಟಿ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಎಂಆರ್ಟಿ ಮ್ಯೂಸಿಕ್ ಪಾಲುದಾರರಾದ ನವೀನ್ ಕುಮಾರ್ ಎಂಬುವರು ನಟ ರಕ್ಷಿತ್ ಶೆಟ್ಟಿ ವಿರುದ್ದ ಯಶವಂತಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತನ್ನ ಸಿನಿಮಾದ ಎರಡು ಹಾಡುಗಳನ್ನು ಅನುಮತಿ ಇಲ್ಲದೇ ನಟ ರಕ್ಷಿತ್ ಶೆಟ್ಟಿ ತಮ್ಮ ಸಿನಿಮಾಗಳಲ್ಲಿ ಬಳಸಿಕೊಂಡಿದ್ದಾರೆ ಎಂದು ನವೀನ್ ಕುಮಾರ್ ಆರೋಪಿಸಿದ್ದಾರೆ. ಸದ್ಯ ಪರಂವಃ ಸ್ಟುಡಿಯೋಸ್ ಹಾಗೂ ನಟ ರಕ್ಷಿತ್ ಶೆಟ್ಟಿ ವಿರುದ್ಧ ಕೇಸ್ ದಾಖಲು ಮಾಡಲಾಗಿದ್ದು ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Poll (Public Option)

Post a comment
Log in to write reviews