
ಬೆಂಗಳೂರು: ರಾತ್ರಿ ಅವಧಿಗೂ ಮೀರಿ ಪಬ್ ತೆರೆದಿದ್ದ ಹಿನ್ನೆಲೆ ಬೆಂಗಳೂರಿನ ಕಸ್ತೂರ್ಬಾ ರಸ್ತೆಯಲ್ಲಿರುವ ಕೊಹ್ಲಿ ಮಾಲೀಕತ್ವದ ಒನ್ 8 ಕಮ್ಯೂನ್ ಪಬ್ ಮೇಲೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ FIR ದಾಖಲಾಗಿದೆ.
ಸರ್ಕಾರ ನಿಗದಿಪಡಿಸಿರುವ ನಿಯಮವನ್ನು ಉಲ್ಲಂಘಿಸಿ ತಡರಾತ್ರಿವರೆಗೂ ಪಬ್ ತೆರೆದು ಪಾರ್ಟಿಗೆ ಅನುವು ಮಾಡಿಕೊಟ್ಟ ರೆಸ್ಟೋರೆಂಟ್, ಬಾರ್, ಪಬ್ ವಿರುದ್ಧ ಜು.6 ರಂದು ರಾತ್ರಿ ಕಬ್ಬನ್ ಪಾರ್ಕ್ ಠಾಣಾ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ, ರಾತ್ರಿ 1.20ರವರೆಗೂ ಪಬ್ ಓಪನ್ ಮಾಡಿದ್ದ ಆರೋಪದಡಿ ನಗರದ ಕಸ್ತೂರ್ಬಾ ರಸ್ತೆಯ ವಿರಾಟ್ ಕೊಹ್ಲಿ ಮಾಲೀಕತ್ವದ ಒನ್ 8 ಕಮ್ಯೂನ್ ಪಬ್ ಮೇಲೆ FIR ದಾಖಲಿಸಲಾಗಿದೆ.
Poll (Public Option)

Post a comment
Log in to write reviews