
ಹಾವೇರಿ: ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿಕ್ಕೇರೂರಿನಲ್ಲಿ ಶನಿವಾರ (8 ಜೂನ್) ಭಾರೀ ಅಗ್ನಿ ಅವಘಡ ಸಂಭವಿಸಿ ಸುಮಾರು 60 ಲಕ್ಷ ರೂ. ನಷ್ಟ ಸಂಭವಿಸಿದೆ.
ಚಿಕ್ಕೇರೂರಿನ ರಸ್ತೆಯೊಂದರಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು ಹೋಟೆಲ್, ಬೇಕರಿ, ಎಲೆಕ್ಟ್ರಿಷಿಯನ್ ಅಂಗಡಿ, ಗೋಬಿ ಮಂಚೂರಿ ಅಂಗಡಿ, ಚಪ್ಪಲಿ ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ. ಸುಮಾರು ಅರ್ಧ ಗಂಟೆ ಹೊತ್ತಿ ಉರಿದ ಬೆಂಕಿಗೆ ಅಂದಾಜು 50-60 ಲಕ್ಷ ಮೌಲ್ಯದ ಆಹಾರ ಪದಾರ್ಥಗಳು, ಚಪ್ಪಲಿ, ಎಲೆಕ್ಟ್ರಾನಿಕ್ ವಸ್ತುಗಳು ಸುಟ್ಟು ಕರಕಲಾಗಿವೆ ಎಂದು ತಿಳಿದು ಬಂದಿದೆ.
ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸುವ ಕಾರ್ಯದಲ್ಲಿ ಮುಂದಾಗಿದ್ದು ಉಂಟಾಗಬಹುದಾಗಿದ್ದ ಭಾರೀ ನಷ್ಟ ತಪ್ಪಿಸಿದೆ.
Poll (Public Option)

Post a comment
Log in to write reviews